Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ: ಸಚಿವ ಕೆ.ಜೆ ಜಾರ್ಜ್
    ಊರ್ಮನೆ ಸಮಾಚಾರ

    ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ: ಸಚಿವ ಕೆ.ಜೆ ಜಾರ್ಜ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಕುಂದಾಪುರ:
    ಸಮುದ್ರ ಮತ್ತು ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಚಿನಲ್ಲಿರುವ ತ್ರಾಸಿ ಮತ್ತು ಮರವಂತೆ ಬೀಚ್‌ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ತ್ರಾಸಿ ಮರವಂತೆ ಬೀಚ್‌ಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು. ತ್ರಾಸಿ ಬೀಚ್‌ನಲ್ಲಿ ಪಾರ್ಕಿಂಗ್, ಫುಡ್‌ಕೋರ್ಟ್, ಸೈಕಲ್ ಟ್ರಾö್ಯಕ್, ಬಯಲು ರಂಗಮಂದಿರ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳು ಸುಮಾರು 9.95 ಕೋಟಿ ರೂ. ವೆಚ್ಚದಲ್ಲಿ ಕಳೆದ 2 ವರ್ಷದಿಂದ ನಡೆಯುತ್ತಿದ್ದು, ಕಾಮಗಾರಿಗೆ ವೇಗ ನೀಡುವುದರೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

    ಕರಾವಳಿ ಭಾಗದಲ್ಲಿ ಬೀಚ್‌ಗಳನ್ನು ಅಭಿವೃದ್ಧಿಗೊಳಿಸಿ, ಕುಡಿಯವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ವಾಹನಗಳ ಪಾರ್ಕಿಂಗ್, ಆಸನದ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಿಸಿದ್ದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನಷ್ಟು ಬಲ ದೊರೆತು ಪ್ರವಾಸಿಗರ ಸಂಖ್ಯೆ ಹೆಚ್ಚುವುದರೊಂದಿಗೆ ಸ್ಥಳೀಯ ಉದ್ಯೋಗಾವಕಾಶಗಳಿಗೂ ಉತ್ತೇಜನ ಸಿಗಲಿದೆ. ಇದಕ್ಕೆ ಒತ್ತು ನೀಡಲಾಗುವುದು ಎಂದರು.

    ಬೀಚ್‌ನಿಂದ ಹೋಟೆಲ್‌ಗೆ ಸಂಪರ್ಕ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿಯ ಮೇಲ್ಭಾಗದಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳೊAದಿಗೆ ಮಾತುಕತೆ ನಡೆಸಲಾಗುವುದು ಎಂದ ಅವರು, ಅಭಿವೃದ್ಧಿ ಕಾಮಗಾರಿಗಳಿಗೆ ಅನಗತ್ಯ ವೆಚ್ಚ ಮಾಡದೇ ಸಾರ್ವಜನಿಕರು ಹಾಗೂ ಪ್ರವಾಸಿಗರ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

    ರಾ.ಹೆ. ಯಲ್ಲಿ ಸುಮಾರು 1.5 ಕಿ.ಮೀ ಉದ್ದವಿರುವ ತ್ರಾಸಿ ಮತ್ತು ಮರವಂತೆ ಬೀಚ್‌ನಲ್ಲಿ ತಡೆಬೇಲಿ ಇಲ್ಲದೇ ಇರುವುದರಿಂದ ಪ್ರವಾಸಿಗರು ಹೆದ್ದಾರಿ ಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನವನ್ನು ನಿಲ್ಲಿಸಿ ಬೀಚ್‌ಗೆ ಇಳಿಯುತ್ತಾರೆ. ಈ ಬಗ್ಗೆ ನಿಗಾವಹಿಸಲು ಹಾಗೂ ಸುರಕ್ಷತಾ ದೃಷ್ಠಿಯಿಂದ ಸ್ಥಳೀಯ ಜೀವರಕ್ಷಕರನ್ನು ಅಗತ್ಯ ತರಬೇತಿ ನೀಡಿ ನೇಮಕ ಮಾಡಲಾಗುವುದು ಎಂದರು. 

    Click here

    Click here

    Click here

    Call us

    Call us

    ಜಿಲ್ಲೆಯ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಹಲವಾರು ಧಾರ್ಮಿಕ ಕ್ರೇತ್ರಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ವ್ಯವಸ್ಥಿತ ಮೂಲಸೌಕರ್ಯ ಒದಗಿಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಮ್.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್‌ಪ್ರಸಾತ್ ಮನೋಹರ್, ಎಡಿಸಿ ಅಬೀದ್ ಗಧ್ಯಾಳ, ಜಿಲ್ಲಾ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಸಮುದಾಯದಳ ಕೊರವಡಿ ವತಿಯಿಂದ ಶಿಕ್ಷಕರ ದಿನಾಚರಣೆ

    08/09/2026

    ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ

    08/09/2026

    ಕುಂದಾಪುರ: ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು 1.10 ಲಕ್ಷ ರೂ. ಕಳವು

    08/09/2026
    Leave A Reply Cancel Reply

    9 − two =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಸಮುದಾಯದಳ ಕೊರವಡಿ ವತಿಯಿಂದ ಶಿಕ್ಷಕರ ದಿನಾಚರಣೆ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ
    • ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ: ಸಚಿವ ಕೆ.ಜೆ ಜಾರ್ಜ್
    • ಕುಂದಾಪುರ: ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು 1.10 ಲಕ್ಷ ರೂ. ಕಳವು
    • ಕರ್ಕುಂಜೆ: ಮನೆಯಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು – ಪ್ರಕರಣ ದಾಖಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.