ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲು ತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರ್ ಗೆ ರೂ. 300 ಸಹಾಯಧನ (ಕೇಂದ್ರದ ಪಾಲು ರೂ. 1500/- ಹಾಗೂ ರಾಜ್ಯದ ಪಾಲು ರೂ. 1500/-) ಗರಿಷ್ಠ 2 ಹೆಕ್ಟೇರ್ ಗಳಿಗೆ ರೂ. 6000/-ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು. ಆಸಕ್ತ ರೈತರು ತಾವು ಖರೀದಿಸಿರುವ ಅಧಿಕೃತ ಬಿಲ್ಲಿನೊಂದಿಗೆ ಆರ್.ಟಿ.ಸಿ., ಆಧಾರ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಗಳೊಂದಿಗೆ ಉಡುಪಿ ತಾಲೂಕಿನ ತೊಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.











