ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಎಕ್ಸ್‌ಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಅತ್ಯುತ್ತಮ ಕ್ರೀಡಾ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಸಂಜನಾ, ಸನ್ವಿತಾ ಹಾಗೂ ದಿವ್ಯ ಮೂವರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಾಲಿಬಾಲ್ ನಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಉಪಸ್ಥಿತರಿದ್ದಾರೆ.
ಕ್ರೀಡಾ ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಪ್ರಶಂಸಿಸಿದ್ದಾರೆ.
















