ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶ್ರೀ ಮಹಾಗಣಪತಿ ಸಭಾಭವನ ಮಟ್ನಕಟ್ಟೆಯಲ್ಲಿ ಜರಗಿತು.

ಸಂಘದ ಅಧ್ಯಕ್ಷರಾದ ಸುಂದರ ಆರ್. ಕೊಠಾರಿ ಅವರು ಅಧ್ಯಕ್ಷತೆಯನ್ನು ವಹಿಸಿ, ಹಾಲುಗಳ ಗುಣಮಟ್ಟ ಹಾಗೂ ಸುಚಿತ್ವದ ಬಗ್ಗೆ ವಿವರವಾಗಿ ಹೇಳುವುದರೊಂದಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹಾಲು ಪೂರೈಸುವಲ್ಲಿ ಸದಸ್ಯರು ಸಹಕರಿಸುವಂತೆ ತನ್ನ ಅಧ್ಯಕ್ಷೀಯ ನುಡಿ ನುಡಿದರು.
ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ವಿಸ್ತರಣಾಧಿಕಾರಿಗಳಾದ ವಾಸುದೇವ ಪುರಾಣಿಕ ಇವರು ಒಕ್ಕೂಟದಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ವಿವರಿಸಿ, ಅದರ ಪ್ರಯೋಜನವನ್ನು ಹೆಚ್ಚು ಹೈನುಗಾರರು ಪಡೆಯಬೇಕು ಎಂದರು.
ಸಂಘದ ನಿರ್ದೇಶಕರುಗಳಾದ ಗೋಪಾಲ ಗಾಣಿಗ, ರಾಮ ಪೂಜಾರಿ, ವಿಜಯಾ ಪ್ರಭು, ಸವಿತಾ ದೇವಡಿಗ, ಮುತ್ತು ದೇವಾಡಿಗ, ಕೃಷ್ಣಿ ದೇವಾಡಿಗ, ಸುಶೀಲ ದೇವಾಡಿಗ, ಭಾಗೀರಥಿ ಪೂಜಾರಿ, ಗೋವಿಂದು ಕೆ. ಸಭೆಯಲ್ಲಿ ಉಪಸ್ಥಿತರಿದ್ದರು.
ವರಿಧಿ ವರ್ಷದಲ್ಲಿ ಸಂಘವು ರೂ. 3.23 ಲಕ್ಷ ನಿವ್ವಳ ಲಾಭಗಳಿಸಿದ್ದು, ಶೇ. 15 ಡಿವಿಡೆಂಡು ಹಾಗೂ ಪ್ರತಿ ಲೀಟರ್ ಹಾಲಿಗೆ ರೂ. ೦.85 ರಂತೆ ಬೋನಸ್ಸನ್ನು ಘೋಷಿಸಲಾಯಿತು. ವಾರ್ಷಿಕವಾಗಿ ಅತೀ ಹೆಚ್ಚು ಹಾಲು ಪೂರೈಸಿದ 10 ಹಾಲು ಉತ್ಪಾದಕ ಸದಸ್ಯರಿಗೆ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ಹೆರಿಯ ಪೂಜಾರಿ ಸ್ವಾಗತಿಸಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿವ್ಯಾ ಎನ್. ಭಟ್ ಇವರು 2025-26ರರ ವಾರ್ಷಿಕ ವರಧಿಯನ್ನು ಮಂಡಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಹಾಲು ಪರಿಕ್ಷಕಿ ವಸಂತಿ ವಂದಿಸಿದರು.
















