ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ಕೂಟರ್ ಸವಾರರೊಬ್ಬರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಹಂಗಳೂರು ಗ್ರಾಮದ ಅಂಕದಕಟ್ಟೆ ಬಳಿ ಸಂಭವಿಸಿದೆ.
ಮಣೂರು ಗ್ರಾಮದ ಕಂಬಳಗದ್ದೆಬೆಟ್ಟು ನಿವಾಸಿ ರಾಜು ಎಂ.ಎಸ್. ಗಾಯಗೊಂಡವರು. ಅವರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಕೋಟೇಶ್ವರ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಹಂಗಳೂರಿನ ಅಂಕದಕಟ್ಟೆ ಬಳಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸ್ಥಳೀಯರು ಗಾಯಾಳುವನ್ನು ಉಪಚರಿಸಿದ್ದರು. ವೈದ್ಯರ ಸಲಹೆಯಂತೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











