ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತೆಂಗಿನ ಮರದಿಂದ ಕಾಯಿ ಕೀಳಲು ಮರ ಹತ್ತಿದ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಯಡ್ತರೆ ಗ್ರಾಮದ ಯೋಜನಾ ನಗರದಲ್ಲಿ ಸಂಭವಿಸಿದೆ.ನಾಗೂರು ನಿವಾಸಿ ವಸಂತ (48) ಮೃತ ಕಾರ್ಮಿಕ.
ಅವರು ಯಡ್ತರೆ ಗ್ರಾಮದ ಯೋಜನಾ ನಗರದ ಪ್ರದೇಶದಲ್ಲಿ ಮರದಿಂದ ಕಾಯಿ ಕೀಳುತ್ತಿದ್ದಾಗ ಕಾಲು ಜಾರಿ ನೆಲಕ್ಕೆ ಬಿದ್ದು ಗಂಬೀರ ಗಾಯಗೊಂಡರು. ಕೂಡಲೇ ಚಿಕಿತ್ಸೆಗಾಗಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅವರು ಚಿಕಿತ್ಸೆಗೆ ಸ್ವಂದಿಸದೆ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.











