ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: :ಬ್ರಹ್ಮಾವರ ತಾಲೂಕು ಐದನೇ ಸಾಹಿತ್ಯ ಸಮ್ಮೇಳನವು ಅ.4 ರಂದು ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿವಕೃಪಾ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆಯಿತು.
ಕಸಾಪ ತಾಲ್ಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಸಮ್ಮೇಳನದ ರೂಪುರೇಷೆ ಕುರಿತು ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರ ಹೆಸರನ್ನು ಅಧ್ಯಕ್ಷ ರಾಮಚಂದ್ರ ಐತಾಳ್ ಘೋಷಿಸಿದರು. ಸಭೆಯಲ್ಲಿ ಸರ್ವನುಮತದಿಂದ ಅಂಗಿಕರಿಸಲಾಯಿತು.
ಜಿಲ್ಲಾ ಸಂಘಟನ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು.
ಸಭೆಯಲ್ಲಿ ಸಮ್ಮೇಳನದ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು. ವೇದಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ಪ್ರತಾಪ ಶೆಟ್ಟಿ, ರಘು ಮಧ್ಯಸ್ಥ,ತಾಲ್ಲೂಕು ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಅಲ್ತಾರು ನಾಗರಾಜ್ ನಿರೂಪಿಸಿ, ವಂದಿಸಿದರು.
















