Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಗಂಗೆಯನ್ನು ಸೇವಿಸಿದರೆ ನರಕದ ವೈತರಣಿ ನದಿಯಿಂದ ತಪ್ಪಿಸಿಕೊಳ್ಳಬಹುದು ಎಂಬ ಮಾತಿದ್ದು, ನಾವಿಂದು ನಾಗರೀಕತೆಯ ಹೆಸರಿನಲ್ಲಿ ಗಂಗಾ ನದಿಯನ್ನೇ ವೈತರಣಿ ನದಿಯಾಗಿ ಪರಿವರ್ತಿಸಿದ್ದೇವೆ. ಗಂಗೆಯನ್ನು ಅಶುದ್ಧಗೊಳಿಸಿರುವುದು ಔರಂಗಜೇಬನ ಹೇಯ ಕೃತ್ಯಗಳಿಗಿಂತಲೂ ಹೀನ ಕೃತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನದಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಹರಿದ್ವಾರದ ನಂತರ ಗಂಗಾ ನದಿಯ ಸ್ವರೂಪವೇ ಬದಲಾಗಿದ್ದು, ಮನುಷ್ಯನ ಮಲಮೂತ್ರಗಳ ಕಾಲುವೆಗಳನ್ನು ನದಿಗೆ ಸೇರಿಸಿ ಗಂಗೆಯನ್ನು ಅಶುದ್ಧ ಗೊಳಿಸಲಾಗಿದೆ. ಇದು ದೇಶಕ್ಕೆ, ಸೃಷ್ಟಿಗೆ ಹಾಗೂ ಮುಂದಿನ ಪೀಳಿಗೆಗೆ ಮಾಡಿದ ಅಪಚಾರ. ಚರಿತ್ರೆಯಲ್ಲಿ ಮುಂದಿನ ಪೀಳಿಗೆ ಈ ತಪ್ಪನ್ನು ಕ್ಷಮಿಸುವುದಿಲ್ಲ. ಇದು ಗಂಗೆಯ ಮೂಲಕ ಸೃಷ್ಟಿಯ ಚಕ್ರಕ್ಕಾಗುತ್ತಿರುವ ಅನ್ಯಾಯ ಎಂದು ಖೇದ ವ್ಯಕ್ತಪಡಿಸಿದರು.

    ಗಂಗೆಯ ನೀರು ದೇಹವನ್ನು ಒಮ್ಮೆ ಪ್ರವೇಶಿಸಿದರೆ ಅದು ಒಂದು ವರ್ಷಗಳ ಕಾಲ ದೇಹದಲ್ಲಿ ಇರುತ್ತದೆ ಎಂಬ ಮಾತಿದೆ. ಗಂಗೆಗೆ ತ್ರಿದೋಷಗಳ ಏರುಪೇರುಗಳನ್ನು ನಿವಾರಿಸುವ ಶಕ್ತಿಯಿದ್ದು, ಮಂದಾಗ್ನಿಯನ್ನು ಪರಿಹರಿಸಿ, ಅಗ್ನಿ ಪ್ರಜ್ವಾಲನೆಯನ್ನು ಮಾಡುತ್ತದೆ ಎಂದು ಆಯುರ್ವೇದ ಆಚಾರ್ಯರು ಪ್ರತಿಪಾದಿಸಿದ್ದಾರೆ.

    ಹಿಂದೆ ರಾಜ ಮಹಾರಾಜರು ದೊಡ್ದ ದೊಡ್ದ ಬೆಳ್ಳಿಯ ಪಾತ್ರೆಗಳಲ್ಲಿ ಗಂಗೆಯನ್ನು ಸಂಗ್ರಹಿಸಿ ಇಟ್ಟುಕೊಳ್ಳುತ್ತಿದ್ದರು. ಸರಿಯಾಗಿ ಸಂಗ್ರಹಿಸಿಟ್ಟಾಗ ಗಂಗಾ ಜಲ ನೂರು ವರ್ಷವಾದರೂ ಏನೂ ಆಗದು. ನಮ್ಮ ಸಂಸ್ಕೃತಿಯಲ್ಲಿ ಗಂಗಾ ನದಿಗೆ ವಿಶೇಷ ಸ್ಥಾನವಿದೆ ಎಂದು ಗಂಗೆಯ ಮಹತ್ವವನ್ನು ವಿವರಿಸಿದರು.

    ಗಂಗೆಯ ಕುರಿತಾಗಿ ಅನೇಕ ಆಧುನಿಕ ಸಂಶೋಧನೆಗಳು ನಡೆದಿದ್ದು, ಗಂಗೆಯಲ್ಲಿ ವಿಶೇಷ ಸೂಕ್ಷ್ಮಾಣುಗಳಿವೆ,  ಗಂಗಾ ನದಿಯ ನೀರಿಗೆ ಹಾನಿಕಾರಕ ಸೂಕ್ಷ್ಮಾಣುಗಳನ್ನು ನಾಶಪಡಿಸುವ ಶಕ್ತಿಯಿದೆ ಎಂದು ಸಂಶೋಧನೆಗಳು ದೃಢಪಡಿಸಿವೆ. ಗಂಗೆ ಸ್ವಯಂ ಶುದ್ಧೀಕರಣ ಗುಣವಿದ್ದು, ತನ್ನನ್ನು ತಾನು ಶುದ್ಧೀ ಕರಿಸಿಕೊಳ್ಳುತ್ತದೆ. ಗಂಗಾ ಜಲವು ದೇಹವನ್ನು ಪ್ರವೇಶಿಸಿದಾಗ ದೇಹದಲ್ಲಿರುವ ಹಾನಿಕಾರಕ ಸೂಕ್ಷ್ಮಾಣುಗಳನ್ನು ನಾಶಪಡಿಸಿ, ಕರುಳಿನಲ್ಲಿರುವ ಒಳ್ಳೆಯ ಸೂಕ್ಷ್ಮಾಣುಗಳನ್ನು ರಕ್ಷಿಸುತ್ತದೆ ಎಂದು ಆಧುನಿಕ ಸಂಶೋಧನೆಗಳು ದೃಢೀಕರಿಸಿದ್ದು, ಆಯುರ್ವೇದದ ಮಾತುಗಳನ್ನು ಇವು ಸಮರ್ಥಿಸುತ್ತದೆ ಎಂದು ಪ್ರತಿಪಾದಿಸಿದರು.

    Click here

    Click here

    Click here

    Call us

    Call us

    ಶ್ರೀಕಂಠ ಶರ್ಮಾ ಮಡೋಡಿ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ದಿನಪ್ರಧಾನರಾಗಿ ನಿಡುವಾಜೆ ರಾಮ ಭಟ್ ಉಪಸ್ಥಿತರಿದ್ದರು.

    ನದಿ ನೀರನ್ನು ತಡೆಯುವುದು ತಪ್ಪು:
    ನದಿಯನ್ನು ತಡೆಯಬಾರದು. ನದಿಯು ತನ್ನನ್ನು ತಾನು ಹರಿಯುವ ಮೂಲಕ ಶುದ್ಧೀಕರಿಸಿಕೊಳ್ಳುತ್ತದೆ. ಯಾವುದೇ ನದಿಯನ್ನು ತಡೆಯುವುದು ಅನರ್ಥಕ್ಕೆ ಕಾರಣವಾಗಿದ್ದು, ಇದು ಪ್ರಕೃತಿಯಲ್ಲಿ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ನದಿಯ ವೇಗವನ್ನು ತಡೆಯುವುದು ಸಲ್ಲ. ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪುಂದ: ರಾಷ್ಟ್ರೀಯ ಹೆದ್ದಾರಿ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಸಭೆ

    09/09/2026

    ಬ್ರಹ್ಮಾವರ ತಾಲ್ಲೂಕು 5ನೇ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ. ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ

    09/09/2026

    ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

    09/09/2026
    Leave A Reply Cancel Reply

    6 − 3 =

    Call us

    Click Here

    Call us

    Call us

    Call us
    Highest Viewed Recently
    • ನದಿ ನೀರನ್ನು ತಡೆಯುವುದು ಅನರ್ಥಕ್ಕೆ ಕಾರಣ: ಶ್ರೀ ರಾಘವೇಶ್ವರ
    • ಉಪ್ಪುಂದ: ರಾಷ್ಟ್ರೀಯ ಹೆದ್ದಾರಿ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಸಭೆ
    • ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ
    • ಆಳ್ವಾಸ್ ಸಾಂಸ್ಕೃತಿಕ ವಿದ್ಯಾರ್ಥಿಗಳ ಬೆಂಬಲಕ್ಕೆ ಕೋಡ್‌ಕ್ರಾಫ್ಟ್‌ನಿಂದ ₹6.28 ಲಕ್ಷ ಸಿಎಸ್‌ಆರ್‌ ನೆರವು
    • ಬ್ರಹ್ಮಾವರ ತಾಲ್ಲೂಕು 5ನೇ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ. ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.