ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಧಾರ್ಮಿಕ ಮತ್ತು ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿರುವ ಸಾರ್ವಜನಿಕ ಉತ್ಸವಗಳು ಜನಮನದಲ್ಲಿ ಭಕ್ತಿಭಾವದ ಜೊತೆಗೆ ಐಕ್ಯತೆಯನ್ನು ಮೂಡಿಸುತ್ತವೆ ಎಂದು ಯು. ಬಿ. ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ದೇವಸ್ಥಾನದ ಸನ್ನಿಧಿಯಲ್ಲಿ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಶಿಸ್ತಿನಿಂದ ಗಣೇಶೋತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೇಶ್ ಭಟ್, ಖ್ಯಾತ ಪ್ರಶ್ನಾ ಚಿಂತಕರು ಹಾಗೂ ದೈವಜ್ಞರಾದ ವಿಷ್ಣು ಪ್ರಸಾದ್ ನಂಬೂದರಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾರಾಯಣ ಖಾರ್ವಿ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ನಾರಾಯಣ ಹೆಗ್ಡೆ, ದಿವಾಕರ ಶೆಟ್ಟಿ, ನಿತಿನ್ ಶೆಟ್ಟಿ, ಅನಿಲ್ ಡಿ., ಪುರುಷೋತ್ತಮದಾಸ್, ಓಂಕಾರ್, ಗೋಪಾಲ, ರಂಜಿತ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಗಣೇಶ್ ಡಿ., ಜನಾರ್ದನ ಡಿ., ಶರತ್ ಕುಮಾರ್ ಶೆಟ್ಟಿ, ಪ್ರಜ್ವಲ್ ಮಯ್ಯ, ಮಂಜುನಾಥ್ ಡಿ., ಮಂಜುನಾಥ್ ದೇವಾಡಿಗ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಊರ ಪ್ರಮುಖರು ಉಪಸ್ಥಿತರಿದ್ದರು.
















