Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ
    ಊರ್ಮನೆ ಸಮಾಚಾರ

    ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ

    Updated:10/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ಸೆ.10:
    ತಾಲೂಕಿನ ಶಿರೂರು ಕೆಳಪೇಟೆ ಸಮೀಪ ಜರುಗಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಶಿರೂರು ನಿವಾಸಿ ನಾಗೇಂದ್ರ ಮಹಾಲೆ (45) ಮೃತ ದುರ್ದೈವಿ. ಸರಣಿ ಅಪಘಾತದಲ್ಲಿ ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂಗೊಂಡಿದೆ.

    Click Here

    Call us

    Click Here

    ನಾಗೇಂದ್ರ ಮಹಾಲೆ

    ಶಿರೂರು ಗ್ರೀನ್ ವ್ಯಾಲಿ ಶಾಲೆಯ ಸಮೀಪದ ಬೆಳಿಗ್ಗೆ ಅಪಘಾತಗೊಂಡು ನಿಂತಿದ್ದ ವಾಹನವನ್ನು ಮೇಲೆತ್ತುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಬೈಂದೂರು ಕಡೆಯಿಂದ ಶಿರೂರು ಕಡೆಗೆ ತೆರಳುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಮುಂದೆಯೇ ಇದ್ದ ಬೈಕ್, ಹೈವೆ ಪೆಟ್ರೋಲ್‌ ವಾಹನ ಸೇರಿದಂತೆ ಒಟ್ಟು ನಾಲ್ಕು ಬೈಕುಗಳಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಓರ್ವ ಬೈಕ್ ಸವಾರ ನಾಗೇಂದ್ರ ಮಹಾಲೆ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನಿತರ ಬೈಕ್ ಸವಾರರು ಹಾಗೂ ಹೈವೆ ಪಟ್ರೋಲ್ ವಾಹನದಲ್ಲಿದ್ದ ಪೊಲೀಸರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ತಂಡವು ಅಪಘಾತಗೊಂಡಿದ್ದ ಲಾರಿಯನ್ನು ಮೇಲೆತ್ತು ಸಂದರ್ಭ ಒಂದು ಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿ ಕ್ರೇನ್ ಮೂಲಕ ಕೆಲಸ ಮಾಡಲಾಗುತ್ತಿತ್ತು. ಇದೇ ವೇಳೆಗೆ ರಬ್ಬರ್ ತುಂಬಿದ ಲಾರಿ ಕೇರಳದಿಂದ ಮಹಾರಾಷ್ಟ್ರದ ಕಡೆಗೆ ತೆರಳುತ್ತಿದ್ದು, ಒತ್ತಿನಣೆಯ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಎದುರಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಸರಣಿ ಅಪಘಾತದ ನಡುವೆಯೂ ಭಾರಿ ದುರಂತವೂ ತಪ್ಪಿಹೊಗಿದೆ.

    ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ

    10/09/2026

    ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    10/09/2026

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ

    10/09/2026
    Leave A Reply Cancel Reply

    3 × 3 =

    Call us

    Click Here

    Call us

    Call us

    Call us
    Highest Viewed Recently
    • ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ
    • ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ
    • ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.