ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಮತ್ತು ಹಳೆ ವಿದ್ಯಾರ್ಥಿ ಸಂಘ ಗುಜ್ಜಾಡಿ ಇವರ ಆಶ್ರಯದಲ್ಲಿ “ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಪೂರ್ವ ಪ್ರಾಥಮಿಕ ಮಕ್ಕಳಿಗಾಗಿ “ಮುದ್ದು ಕೃಷ್ಣ ಮುದ್ದು ರಾಧೆ” ಸ್ಪರ್ಧೆ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣ ಆಚಾರ್ಯ ಗುಜ್ಜಾಡಿ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಶಾಲಾ ಮುಖ್ಯೋಪಾಧ್ಯಾಯ ಗಂಗಾಧರ ಬಂಟ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಎ.ಆರ್.ವಲಿವುಲ್ಲಾ. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಘವೇಂದ್ರ ಡಿ., ಎಸ್.ಡಿ.ಎಂ.ಸಿ ಸದಸ್ಯೆ ಕವಿತಾ ಸೀತಾರಾಮ ಗಾಣಿಗ ಉಪಸ್ಥಿತರಿದ್ದರು.
ನಯನ ಮೇಸ್ತ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.











