ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕಬಡ್ಡಿಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆರಿದ ಮಮತಾ ಪೂಜಾರಿಯವರ ಸಾಧನೆಯ ದಾರಿಯನ್ನು ನೀವುಗಳು ಪ್ರೇರಣೆಯಾಗಿ ಪಡೆದು ಸಾಧನೆಯ ಮಜಲುಗಳನ್ನು ಏರಿ ಎಂದು ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಡುಪಿ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹೇಳಿದರು.
ಅವರು ಗುರುವಾರ ಕೆ.ಪಿ.ಎಸ್ ಮಣೂರು ಪಡುಕರೆ ಶಾಲಾ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆ.ಪಿ.ಎಸ್) ಮಣೂರು ಪಡುಕರೆ ಸಾರಥ್ಯದಲ್ಲಿ 14 ಮತ್ತು 17 ರ ವಯೋಮಾನದ ಬಾಲಕ-ಬಾಲಕಿಯರಿಗಾಗಿ ಹಮ್ಮಿಕೊಳ್ಳಲಾದ ಬ್ರಹ್ಮಾವರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕಬಡ್ಡಿಯಲ್ಲಿ ನಿರಂತರ ತರಬೇತಿ ಪರಿಶ್ರಮ ಅಗತ್ಯ ,ಅರ್ಹತೆ ಪ್ರತಿಯೊರ್ವರಲ್ಲೂ ಇರುತ್ತದೆ ಆದರೆ ಅದನ್ನು ಸದ್ಭಳಕೆ ಮಾಡಿಕೊಳ್ಳುವ ವಿಧಾನವನ್ನು ನೀವುಗಳು ತರಬೇತುದಾರರ ಮೂಲಕ ಅನುಷ್ಠಾನಗೊಳಿಸಿಕೊಳ್ಳಿ ಎಂದರು.
ಕೋಟ ಮಣೂರು ಗೀತಾನಂದ ಫೌಂಡೇಶನ್ ನಿರ್ದೇಶಕಿ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್ ಅವರು ದೀಪ ಬೆಳಗಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಇದೇ ವೇಳೆ ಕ್ರೀಡಾಸ್ಪೂರ್ತಿ ಪಾರಿವಾಳವನ್ನು ಹಾರಿಬಿಡುವ ಮೂಲಕ ಅಧೀಕೃತವಾಗಿ ಚಾಲನೆ ನೀಡದ ರಾಜೇಂದ್ರ ಸುವರ್ಣ ಕ್ರೀಡಾಳುಗಳ ಕೈಕುಲುಕಿ ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಪಿ.ಎಸ್ ಪಡುಕರೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗರಾಜ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಸರ್ಕಾರಿ ಪದವಿ ಕಾಲೇಜು ಪಡುಕರೆಯ ಪ್ರಾಂಶುಪಾಲ ಡೆನಿಸ್ ಬಾಂಝಿ ಹಾಗೂ ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್. ಕುಂದರ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘ ಗ್ರೇಡ್ ೨ ಇದರ ತಾಲೂಕು ಅಧ್ಯಕ್ಷ ಶ್ರೀಕಾಂತ್ ಸಾವಂತ್,ಗ್ರೇಡ್ 1 ಇದರ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಜಾರಾಂ ಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರವಿರಾಜ್ ಶೆಟ್ಟಿ,ಪ್ರಾಥಮಿಕ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ವಿನಯ್ ಕುಮಾರ್ ,ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಜಯ ಉಪಸ್ಥಿತರಿದ್ದರು.
ಫ್ರೌಢಶಾಲಾ ಮುಖ್ಯ ಶಿಕ್ಷಕ ವಿವೇಕಾನಂದ ಗಾಂವ್ಕರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಚಿತ್ರಪಾಡಿ ಶಾಲಾ ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿದರು.
















