Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯ ನಾಗರಿಕರು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ನಡೆಸುಂತಾಗಲಿ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್
    ಉಡುಪಿ ಜಿಲ್ಲೆ

    ಹಿರಿಯ ನಾಗರಿಕರು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ನಡೆಸುಂತಾಗಲಿ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ಕಾಯಿದೆ ಹಾಗೂ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವಿದ್ದಾಗ ಮಾತ್ರ ಹಿರಿಯರ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ. ಈ ಬಗ್ಗೆ ಜನರಿಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಹಿರಿಯ ಜೀವಗಳು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ಜೀವಿಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು.

    Click Here

    Click Here

    Call us

    Click Here

    ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ತಂದೆ ತಾಯಿಯರ ಮತ್ತು ಹಿರಿಯ ನಾಗರಿಕರ ಪಾಲನೆ -ಪೋಷಣೆ ಮತ್ತು ಕಲ್ಯಾಣ ಅಧಿನಿಯಮ – 2007 ರ ಕುರಿತು ಅಧಿಕಾರಿಗಳಿಗೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಆಯೋಜಿಸಲಾದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ಆಧುನಿಕ ಜೀವನ ಶೈಲಿ, ತಂತ್ರಜ್ಞಾನದ ಬೆಳವಣಿಗೆ, ನಗರಿಕರಣ, ವಿಭಕ್ತ ಕುಟುಂಬ ಪದ್ಧತಿ ಸೇರಿದಂತೆ ಮತ್ತಿತರ ಕಾರಣಗಳಿಂದ ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರು ಸಂಕಷ್ಟಕ್ಕೆ ಒಳಗಾಗುತ್ತಿದ್ದು, ಅವರುಗಳ ಪೋಷಣೆ ಮತ್ತು ರಕ್ಷಣೆ ಅತ್ಯವಶ್ಯಕವಾಗಿ ಇದೆ. ಇಂತಹ ಹಿರಿಯ ನಾಗರಿಕರ ರಕ್ಷಣೆಗಾಗಿ ಪಾಲಕರ ಪೋಷಕರ ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ 2007 ಜಾರಿಗೆ ತರಲಾಗಿದೆ ಎಂದ ಅವರು, ಕಾಯಿದೆಯು ನಿರಾಶ್ರಿತ ಪೋಷಕರ ಹಾಗೂ ಹಿರಿಯ ನಾಗರಿಕರ ಹಿತರಕ್ಷಣೆ ಕಾಪಾಡುವ ಉದ್ದೇಶ ಹೊಂದಿದೆ ಎಂದರು.

    ಮನುಷ್ಯ ತನ್ನ ಜೀವನದಲ್ಲಿ ಬಾಲ್ಯ, ಯೌವ್ವನ ಹಾಗೂ ವೃದ್ಧಾಪ್ಯನಾಗುವವರೆಗೆ ಸಮಾಜದ ಅನೇಕ ಮುಖಗಳನ್ನು ನೋಡಿರುತ್ತಾನೆ. ಸಾಮಾಜಿಕ ಜೀವನ ಶೈಲಿ, ಸುಖ – ದುಃಖ, ಕಷ್ಟ -ನಷ್ಟ, ಧೈರ್ಯ, ಸಾಮರ್ಥ್ಯ ಸೇರಿದಂತೆ ಬದುಕಿನ ಎಲ್ಲಾ ಹಂತಗಳಲ್ಲಿಯೂ ಸವಾಲಾಗಿ ಸ್ವೀಕರಿಸುವಂತಹ ವಿವೇಕ ಹಿರಿಯ ಚೇತನರಲ್ಲಿ ಇರುತ್ತದೆ. ನಮ್ಮಗಳ ಬದುಕಿನುದ್ದಕ್ಕೂ ಹಿರಿಯ ನಾಗರಿಕರು ಮಾರ್ಗದರ್ಶಕರಾಗಿ ಇರಲಿದ್ದು, ಅವರುಗಳು ಗೌರವಯುತ ಜೀವನ ನಡೆಸುವಂತಾಗಬೇಕು ಎಂದರು.

    ಹಿರಿಯ ನಾಗರಿಕರ ಮೇಲಾಗುವ ನಿರ್ಲಕ್ಷ್ಯತನ ಹಾಗೂ ದೌರ್ಜನ್ಯ ತಡೆಗಟ್ಟಲು ಕಾಯಿದೆಗಳು ಸಹಕರಿಯಾಗಲಿದೆ. ಅಧಿಕಾರಿಗಳು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಕಾರ್ಯಾಗಾರದ ಆಯಾಮಗಳನ್ನು ತಿಳಿದುಕೊಂಡು ತಮ್ಮ ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಈ ಸಂದರ್ಭದಲ್ಲಿ ಕಾನೂನಿನ ಅರಿವು ಮೂಡಿಸುವುದು ಮಾತ್ರವಲ್ಲದೆ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದು ಅತೀ ಮುಖ್ಯವಾಗಿರುತ್ತದೆ ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಮಕ್ಕಳನ್ನು ಚಿಕ್ಕಂದಿನಿಂದ ಪ್ರೀತಿ ಕಾಳಜಿಯಿಂದ ಬೆಳೆಸಿ, ಜೀವನ ರೂಪಿಸಿಕೊಳ್ಳಲು ಸಾಕಷ್ಟು ಏರಿಳಿತಗಳನ್ನು ಅನುಭವಿಸಿರುವ ಹಿರಿಯ ನಾಗರಿಕರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಯಾವುದೇ ಕಾಯಿದೆಗಳನ್ನು ಅನುಷ್ಠಾನ ಮಾಡುವಾಗ ಕಾನೂನಿನೊಂದಿಗೆ ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿದ್ದಲ್ಲಿ ಹಿರಿಯ ನಾಗರಿಕರ ಬದುಕಿಗೆ ಆಸರೆಯಾಗಲಿದೆ ಎಂದ ಅವರು ಈ ಕಾಯಿದೆಗಳ ಬಗ್ಗೆ ವಿಶೇಷವಾಗಿ ಮಕ್ಕಳಲ್ಲಿಯೂ ಅರಿವು ಮೂಡಿಸಬೇಕಿದೆ ಎಂದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರೇಮಮೂರ್ತಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಆಧುನಿಕ ಜೀವನ ಶೈಲಿಯಿಂದಾಗಿ ಪ್ರಸ್ತುತ ಹಿರಿಯ ನಾಗರಿಕರ ಸಂಖ್ಯೆಯೊAದಿಗೆ ಅವರುಗಳನ್ನು ನೋಡಿಕೊಳ್ಳುತ್ತಿರುವ ವೃದ್ಧಾಶ್ರಮಗಳು, ಹಿರಿಯ ನಾಗರಿಕರ ಆಶ್ರಯ ಕೇಂದ್ರಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದು ವಿಷಾಧನೀಯ ಸಂಗತಿ. ಜೀವನದ ಅಪಾರ ಅನುಭವವುಳ್ಳ ಹಿರಿಯ ನಾಗರಿಕರ ಮಾರ್ಗದರ್ಶನ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿದೆ ಎಂದ ಅವರು, ಹಿರಿಯ ನಾಗರಿಕರಿಗೆ ಸಮಾಜದಲ್ಲಿ ಆರ್ಥಿಕ ಭದ್ರತೆ ಒದಗಿಸಲು, ಅರೋಗ್ಯ ರಕ್ಷಣೆ, ಸಾಮಾಜಿಕ ಒಳಗೊಳ್ಳುವಿಕೆ ಕುರಿತು ಅವರುಗಳಿಗೆ ಹಾಗೂ ಸಾರ್ವಜನಿಕರಿಗೆ ಕಾಯಿದೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್ ಕಾನೂನು ಅನುಷ್ಠಾನದಲ್ಲಿ ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಪರಿಣಾಮಗಳ ಕುರಿತು, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ ಶಾನುಭಾಗ್ ಅವರು ಪ್ರಕರಣ ಅಧ್ಯಯನ – ಜಿಲ್ಲೆಯಲ್ಲಿ ವರದಿಯಾದ ಪ್ರಮುಖ ಪ್ರಕರಣಗಳ ವಿಶ್ಲೇಷಣೆ ಮುಂತಾದ ವಿಷಯಗಳ ಬಗ್ಗೆ ಮಂಡನೆ ಮತ್ತು ಚರ್ಚೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿವೃತ್ತ ಅಧಿಕಾರಿ ಎಂ ನಿರಂಜನ್ ಭಟ್ ಅವರು ಎಂ.ಡಬ್ಲೂö್ಯಪಿ.ಎಸ್ ಆಕ್ಟ್ -2007 ರ ಉದ್ದೇಶ ಹಾಗೂ ನಿರ್ವಹಣೆ, ನ್ಯಾಯ ಮಂಡಳಿಯ ಪ್ರಕ್ರಿಯೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

    ಕಾರ್ಯಾಗಾರದಲ್ಲಿ ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಂವಾದ ನಡೆಸುವುದರೊಂದಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಹಿರಿಯ ನಾಗರಿಕರ ವೇದಿಕೆ ಜಿಲ್ಲಾ ಹಾಗೂ ತಾಲೂಕು ಒಕ್ಕೂಟದ ಪದಾಧಿಕಾರಿಗಳು, ವೃದ್ಧಾಶ್ರಮಗಳ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸ್ವಾಗತಿಸಿ, ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ

    24/10/2026

    ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ

    19/10/2026

    ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್‌ಪಾಲ್ ಸುವರ್ಣ

    19/10/2026
    Leave A Reply Cancel Reply

    fourteen + 9 =

    Call us

    Click Here

    Call us

    Call us

    Call us
    Highest Viewed Recently
    • ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ
    • ಕೋಟದಲ್ಲಿ ಭೀಕರ ಅಪಘಾತ – ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು
    • ಮಂಜುನಾಥ ದೇವಾಡಿಗ ಅವರಿಗೆ ಯೋಗಶ್ರೀ ಪ್ರಶಸ್ತಿ ಪ್ರದಾನ
    • ಕುಂದಾಪುರ: ಪದವಿಯನ್ನು ಮೀರಿ- ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳ ವಿಷಯದ ಕುರಿತು ಉಪನ್ಯಾಸ
    • ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.