Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    alvas nudisiri

    ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಕೇರಳದ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಜೀವನಶೈಲಿಯನ್ನು ಕರ್ನಾಟಕದ ನೆಲದಲ್ಲಿ ಅನಾವರಣಗೊಳಿಸುವ ‘ಆಳ್ವಾಸ್ ಕೇರಳೀಯಂ–2026’ ಕಾರ್ಯಕ್ರಮ ಆಳ್ವಾಸ್ ವಿದ್ಯಾಸಂಸ್ಥೆಯ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಗುರುವಾರ ವೈಭವದಿಂದ ನಡೆಯಿತು.

    Click Here

    Call us

    Click Here

    ಕೇರಳದ ಸಾಂಸ್ಕೃತಿಕ ಪರಂಪರೆಯ ವೈವಿಧ್ಯವನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಟ್ಟ ಭವ್ಯ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು. ಕೇರಳದ ಸಾಂಪ್ರದಾಯಿಕ ವೇಷಭೂಷಣ, ಜನಪದ ಕಲೆ, ಶಾಸ್ತ್ರೀಯ ನೃತ್ಯ, ವಾದ್ಯ ಸಂಗೀತ ಹಾಗೂ ಆಚರಣೆಗಳ ಸೊಬಗನ್ನು ಮೆರವಣಿಗೆಯಲ್ಲಿ ಪ್ರಸ್ತುತಪಡಿಸಲಾಯಿತು.

    ಮೆರವಣಿಗೆಯಲ್ಲಿ ಕಥಕಳಿ, ಮೋಹಿನಿಯಾಟ್ಟಂ ಮತ್ತು ಮಾವೇಲಿ ಪಾತ್ರಗಳ ಸಂಯೋಜಿತ ಪ್ರದರ್ಶನ ಗಮನ ಸೆಳೆಯಿತು. ಕೇರಳದ ಸಾಂಪ್ರದಾಯಿಕ ವಾದ್ಯ ಪರಂಪರೆಯನ್ನು ಪ್ರತಿಬಿಂಬಿಸುವ ಪಂಚವಾದ್ಯ ಮೆರವಣಿಗೆಗೆ ವಿಶಿಷ್ಟ ಮೆರುಗು ನೀಡಿತು. ಅದರೊಂದಿಗೆ ತಾಲಪೊಲಿ, ಪುಲಿಕಳಿ, ಚೆಂಡೆ, ಬಾಲಕ–ಬಾಲಕಿಯರ ಸಾಂಸ್ಕೃತಿಕ ಸಂಯೋಜಿತ ಪ್ರದರ್ಶನ, ಕಾವಡಿ, ಒಪ್ಪನ, ಕೋಲ್ಕಳಿ, ಕಲರಿ ಮೊದಲಾದ ಕಲಾ ಪ್ರಕಾರಗಳು ಮೆರವಣಿಗೆಯಲ್ಲಿ ಮೂಡಿಬಂದವು. ಕೇರಳದ ಉತ್ತರ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ತೆಯ್ಯಂ ವಿವಿಧ ರೂಪಗಳಲ್ಲಿ ಪ್ರಸ್ತುತವಾಯಿತು. ಥಾಬೋಲಂ, ಗರುಡನ್ ಹಾಗೂ ಪೂರ್ಣ ತಿರುವಾತಿರ ಪ್ರದರ್ಶನಗಳು ಮೆರವಣಿಗೆಯ ಮತ್ತಷ್ಟು ಪ್ರಮುಖ ಆಕರ್ಷಣೆಗಳಾಗಿದ್ದವು.

    ಹೀಗೆ ಕೇರಳದ ಶಾಸ್ತ್ರೀಯ, ಜನಪದ ಹಾಗೂ ಆಚರಣಾಧಾರಿತ ಕಲೆಗಳ ವೈವಿಧ್ಯವನ್ನು ವಿದ್ಯಾರ್ಥಿಗಳು ಕಲಾತ್ಮಕವಾಗಿ ಕಟ್ಟಿಕೊಟ್ಟರು.
    ಕೇರಳದ ಸಾಂಪ್ರದಾಯಿಕ ಜನಪದ ನೃತ್ಯವಾದ ಮೆಗಾ ತಿರುವಾತ್ತಿರ ಕಾರ್ಯಕ್ರಮದ ಆರಂಭದಲ್ಲೇ ವಿಶೇಷ ಮೆರುಗು ನೀಡಿತು. ಇದಾದ ಬಳಿಕ ಕೇರಳದ ವಿವಿಧ ಪ್ರದೇಶಗಳ ವಿಶಿಷ್ಟ ಕಲಾ ಪರಂಪರೆಗಳನ್ನು ಪ್ರತಿನಿಧಿಸುವ ಕಾಯ್ಕೊಟ್ಟಿಕಲಿ, ಒಪ್ಪಣ, ಕೊಲ್ಕಳಿ, ಕಲರಿ ಮತ್ತು ತೆಯ್ಯಂ ಸೇರಿದಂತೆ ಹಲವು ಕಲಾ ಪ್ರಕಾರಗಳು ವೇದಿಕೆಯಲ್ಲಿ ಮೂಡಿಬಂದವು.

    ಕಾರ್ಯಕ್ರಮ ಉದ್ಘಾಟಿಸಿದ ಮಲಯಾಳಂ ಚಿತ್ರರಂಗದ ನಟ ಹಾಗೂ ನಿರ್ದೇಶಕ ಬಿನು ಪಪ್ಪು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಆದ್ಯತೆ ನೀಡಿ ಕಠಿಣ ಪರಿಶ್ರಮದ ಮೂಲಕ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕು ಎಂದು ಕರೆ ನೀಡಿದರು. ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಸುರಕ್ಷಿತ ಮತ್ತು ಜವಾಬ್ದಾರಿಯುತ ಜೀವನ ನಡೆಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಹಾಗೂ ಆಟೋಮೋಟಿವ್ ಕಂಟೆಂಟ್ ಕ್ರಿಯೇಟರ್, ಆಳ್ವಾಸ್‌ನ ಹಳೆ ವಿದ್ಯಾರ್ಥಿ ಮೊಹಮ್ಮದ್ ಫಹಾದ್, ಆಳ್ವಾಸ್ ಸಂಸ್ಥೆಯ ಬೆಳವಣಿಗೆ ಹಾಗೂ ಇಂತಹ ವೈವಿಧ್ಯಮಯ ಕಾರ್ಯಕ್ರಮವನ್ನು ಆಯೋಜಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾವು ವಿದ್ಯಾಭ್ಯಾಸ ಮಾಡಿದ ಸಂಸ್ಥೆ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆದಿರುವುದು ಹೆಮ್ಮೆಯ ಸಂಗತಿ ಎಂದರು.

    Click here

    Click here

    Click here

    Call us

    Call us

    ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಭಾರತದ ವಿವಿಧ ಭಾಗಗಳ ವಿದ್ಯಾರ್ಥಿಗಳು ಕೇರಳದ ಸಂಸ್ಕೃತಿಯನ್ನು ಒಟ್ಟಾಗಿ ಪ್ರಸ್ತುತಪಡಿಸಿರುವುದು ದೇಶದ ಸಾಂಸ್ಕೃತಿಕ ವೈವಿಧ್ಯತೆಯ ಪ್ರತಿಬಿಂಬವಾಗಿದೆ. ಕೇರಳದ ವೈಶಿಷ್ಟ್ಯವೇ ಅದರ ವೈವಿಧ್ಯತೆ. ವಿಭಿನ್ನ ಧರ್ಮ, ಸಮುದಾಯ ಮತ್ತು ಚಿಂತನೆಗಳ ಜನರು ಪರಸ್ಪರ ಗೌರವದೊಂದಿಗೆ ಬದುಕುತ್ತಿರುವ ಕೇರಳದ ಸಾಮಾಜಿಕ ಸಾಮರಸ್ಯ ದೇಶಕ್ಕೆ ಮಾದರಿ. ಎಲ್ಲರನ್ನು ಒಗ್ಗೂಡಿಸುವ ಓಣಂ ಈ ವೈವಿಧ್ಯತೆಯ ಪ್ರತೀಕವಾಗಿದೆ.

    ಕೇರಳವು ಕ್ರೀಡೆ, ಶಿಕ್ಷಣ, ವಿಜ್ಞಾನ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಪಿ.ಟಿ. ಉಷಾ, ಡಾ. ವರ್ಗೀಸ್ ಕುರಿಯನ್ ಮತ್ತು ಅರುಂಧತಿ ರಾಯ್ ಅವರಂತಹ ಗಣ್ಯರನ್ನು ಕೊಡುಗೆಯಾಗಿ ನೀಡಿದೆ. ಇಂತಹ ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಯುವಜನರ ಮೇಲಿದೆ ಎಂದರು.

    ಕಾರ್ಯಕ್ರಮದಲ್ಲಿ ಉದ್ಯಮಿ ಮುಸ್ತಾಫ, ಪ್ರಮುಖರಾದ ಅಕ್ಷಯ ಜೈನ್, ನೌಷಧ್, ಕಾಲೇಜಿನ ಹಿರಿಯ ವಿದ್ಯಾರ್ಥಿ ಫಾವಜ್ , ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಇದ್ದರು. ಫೆನಿಲ್ಡಾ ನಿರೂಪಿಸಿ, ಕೆಝಿಯಾ ಮೇರಿ ಜಾರ್ಜ ಸ್ವಾಗತಿಸಿ, ಆರಂಟಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    11/09/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಉದ್ಘಾಟನೆ

    11/09/2026

    ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

    11/09/2026
    Leave A Reply Cancel Reply

    4 + six =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    • ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    • ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    • ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.