ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಗುಂಡ್ಮಿ ಸಮೀಪದ ಹದ್ದಿನಬೆಟ್ಟು ಯಡಬೆಟ್ಟು ಸಾಮೂಹಿಕ ಶ್ರೀ ಗಣೇಶೋತ್ಸವ ಆರಾಧನೋತ್ಸವ ಸಮಿತಿ ಆಶ್ರಯದಲ್ಲಿ ಇದೇ ಸೆಪ್ಟೆಂಬರ್ 14ರಂದು ಸಂಜೆ 07. ಗಂಟೆಗೆ ಹದ್ದಿನಬೆಟ್ಟು ಪರಿಸರದಲ್ಲಿ ನಡೆಯುವ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಆರಾಧನೋತ್ಸವ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ ಗುಂಡ್ಮಿ ತಿಳಿಸಿದ್ದಾರೆ
ಈ ಪುರಸ್ಕಾರ 50 ಸಾವಿರ ನಗದು ಒಳಗೊಂಡ ಶಾಶ್ವತ ಫಲಕ ನೀಡಿ ಗೌರವಿಸಲಿದೆ ಅಲ್ಲದೆ ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ದತ್ತುಸ್ವೀಕಾರ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯ 30 ವಿದ್ಯಾರ್ಥಿಗಳಿಗೆ 5 ಸಾವಿರ ರೂ.ಗಳಂತೆ ವಿದ್ಯಾರ್ಥಿ ವೇತನ ವಿತರಣೆ,ಎರಡು ಸ್ಥಳೀಯ ಸರಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಒಂದು ವರ್ಷದ ಮಾಸಿಕ ಗೌರವ ವೇತನ, 6 ಜನ ಅನಾರೋಗ್ಯ ಪೀಡಿತರಿಗೆ ಸಹಾಯನಿಧಿ ವಿತರಣೆ ಜತೆಗೆ ಹಲವು ಸಾಮಾಜಿಕ ಕಾರ್ಯಗಳು ಈ ವೇದಿಕೆಯಲ್ಲಿ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











