Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಕರೆ
    ಉಡುಪಿ ಜಿಲ್ಲೆ

    ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಕರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. 

    Click Here

    Call us

    Click Here

    ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆಯ ಸಲುವಾಗಿ ಕಾನೂನು ಸುವಸ್ಯವಸ್ಥೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಗೌರಿ – ಗಣೇಶ ಹಬ್ಬವನ್ನು ಇದೇ ಸೆಪ್ಟೆಂಬರ್ 13 ಮತ್ತು 14 ರಂದು ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವುದರೊಂದಿಗೆ ನೈಸರ್ಗಿಕ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೈಸರ್ಗಿಕವಾಗಿ ನೀರಿನಲ್ಲಿ ಕರಗುವುದಿಲ್ಲ. ಇವು ಮಾಲಿನ್ಯ ಉಂಟು ಮಾಡುವುದರೊಂದಿಗೆ ಜಲಚರಗಳಿಗೆ ಹಾನಿ ಉಂಟು ಮಾಡುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.

    ನೈಸರ್ಗಿಕ ಜಲ ಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿರುವ ತಾತ್ಕಾಲಿಕ/ ಕೃತಕ ವಿಸರ್ಜನಾ ತೊಟ್ಟಿಗಳಲ್ಲಿ ವಿಗ್ರಹಗಳನ್ನು ವಿಸರ್ಜನೆ ಮಾಡಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ ಹಾಗೂ ಒಣಕಸವನ್ನು ನೀರಿಗೆ ಎಸೆಯದೆ ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ನದಿ, ಕೆರೆ, ಕೊಳ ಅಥವಾ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜನೆ ಅನಿವಾರ್ಯವಾಗಿರುವಲ್ಲಿ ನಿಗಧಿತ ಸ್ಥಳಗಳಲ್ಲಿ ಸುರಕ್ಷತಾ ವ್ಯವಸ್ಥೆಗಳೊಂದಿಗೆ ಮೌಲಭೂತ ಸೌಕರ್ಯಗಳನ್ನು ನಿಗಧಿಪಡಿಸಿ, ರಕ್ಷಣಾ ತಂಡ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

    ಪಿ.ಒ.ಪಿ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ತಡೆಗಟ್ಟಲು ಹಬ್ಬಕ್ಕೆ ಮುಂಚಿತವಾಗಿಯೇ ಮೂರ್ತಿ ತಯಾರಿಕಾ ಘಟಕಗಳು, ಸಂಗ್ರಹಣಾ ಗೋದಾಮುಗಳು ಮತ್ತು ಮಾರಾಟ ಕೇಂದ್ರಗಳ ಮೇಲೆ ನಿರಂತರ ತಪಾಸಣೆ ನಡೆಸಬೇಕು. ಒಂದೊಮ್ಮೆ ಪಿ.ಒ.ಪಿ ಬಳಸಿ ತಯಾರಿಸಿದ ಮೂರ್ತಿಗಳ ಸಂಗ್ರಹಣೆ, ಮಾರಾಟ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದರು.

    ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವಾಗ ಸಮಿತಿಯವರು ಸ್ಥಳೀಯ ಸಂಸ್ಥೆಗಳಿಂದ ಮತ್ತು ಧ್ವನಿವರ್ಧಕ ಬಳಸಲು ಪೋಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿಗಳನ್ನು ಪಡೆಯಬೇಕು. ಗಣೇಶೋತ್ಸವ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್  ಬಳಕೆ, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿ ವರ್ಧಕಗಳ ಬಳಕೆಯನ್ನು ಹಾಗೂ ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

    Click here

    Click here

    Click here

    Call us

    Call us

    ಶಾಲಾ- ಕಾಲೇಜು, ಸಾಮಾಜಿಕ ಜಾಲತಾಣ ಹಾಗೂ ಸರ್ಕಾರೇತರ ಸಂಸ್ಥೆಗಳ ಮೂಲಕ ಸಾರ್ವಜನಿಕರಿಗೆ ಪ್ಲಾಸ್ಟರ್ ಆಪ್ ಪ್ಯಾರಿಸ್ ಮೂರ್ತಿಗಳಿಂದ ಆಗುವ ಅಪಾಯಗಳ ಕುರಿತು ಮತ್ತು ಪರಿಸರ ಸ್ನೇಹಿ ಮೂರ್ತಿಗಳ ಬಳಕೆಯ ಕುರಿತು ನಿರಂತರ ಜಾಗೃತಿ ಮೂಡಿಸಬೇಕು ಎಂದ ಅವರು, ಗಣೇಶ ವಿಸರ್ಜನಾ ಮೆರವಣಿಗೆಗಳು ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳಿಂದ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಜಿಲ್ಲಾ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಇ.ಓಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ

    22/09/2026

    ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

    22/09/2026

    ಡಿಪ್ಲೋಮ ಇನ್ ಕೋ-ಆಪರೇಟಿವ್ ಮೇನೇಜ್‌ಮೆಂಟ್ ಕೋರ್ಸ್‌ನಲ್ಲಿ ಶ್ರೀಧರ್ ಸಾಸ್ತಾನ ಅವರು ‘ಎ’ ಶ್ರೇಣಿಯಲ್ಲಿ ತೇರ್ಗಡೆ

    21/09/2026
    Leave A Reply Cancel Reply

    18 − eleven =

    Call us

    Click Here

    Call us

    Call us

    Call us
    Highest Viewed Recently
    • ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ
    • ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ
    • ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ಕಾಲೇಜು ಸ್ಕೌಟ್ಸ್-ಗೈಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.