Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಂಸತ್ತು ಸಭೆಯ ಕುರಿತು ಮಾಹಿತಿ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದರು.

    ಸೆಪ್ಟಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಸೆ. 16 ರಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಫರ್ಧೆಗಳು ಆರಂಭವಾಗಲಿದ್ದು, ಅಕ್ಟೋಬರ್ 10 ರ ಒಳಗಾಗಿ ತಾಲೂಕು ಮಟ್ಟದ ಸ್ಪರ್ಧೆಗಳನ್ನು ಪೂರ್ಣಗೊಳಿಸಬೇಕು. ಉತ್ತಮ ವಾಕ್ ಚಾತುರ್ಯ ಇರುವ ಮಕ್ಕಳನ್ನು ಪ್ರೇರೇಪಿಸಿ, ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದ ಅವರು, ಸಂಸತ್ತು / ವಿಧಾನಸಭೆಯ ಮಾದರಿಯಲ್ಲಿ ಸಭಾಂಗಣವನ್ನು ಸಿದ್ಧಪಡಿಸಿ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು ಎಂದರು.

    ಜಿಲ್ಲಾ ಮಟ್ಟದಲ್ಲಿ ನಡೆಯುವ ಯುವ ಸಂಸತ್ತು ಸಭೆಗೆ ಪ್ರತಿ ತಾಲೂಕಿನಿಂದ ಆಯ್ದ ವಿದ್ಯಾರ್ಥಿಗಳನ್ನು ಕಳುಹಿಸಿಕೊಡಬೇಕು. ಅ. 11 ರಿಂದ 30 ರ ಒಳಗಾಗಿ ಜಿಲ್ಲಾ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು.  ಅತ್ಯುತ್ತಮವಾಗಿ ಚರ್ಚೆಯಲ್ಲಿ ಪಾಲ್ಗೊಂಡ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ, ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಿಕೊಡಲಾಗುವುದು ಎಂದರು.

    ಸಂವಿಧಾನ ದಿನಾಚರಣೆಯ ದಿನವಾದ ನವೆಂಬರ್ 26 ರಂದು ಎಲ್ಲಾ 224 ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಬಂದ ವಿದ್ಯಾರ್ಥಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಯುವ ಸಂಸತ್ ಸಭೆಯು ಬೆಂಗಳೂರಿನಲ್ಲಿ ನಡೆಯಲಿದೆ ಎಂದ ಅವರು, ಸರಕಾರದ ನಿರ್ದೇಶನದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಜಿಲ್ಲಾ ವಕೀಲರ ಸಂಘದ ಸಮನ್ವಯದೊಂದಿಗೆ ಅಚ್ಚುಕಟ್ಟಾಗಿ ನಡೆಸಬೇಕು ಎಂದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಇ.ಓಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ

    12/09/2026

    ಉಡುಪಿ: ಸೆ.16ರಂದು ಖಾಸಗಿ ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    12/09/2026

    ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

    12/09/2026
    Leave A Reply Cancel Reply

    5 − three =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.