Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಲಭದ ದಾರಿ ಬಿಟ್ಟು ಸರಿಯಾದ ದಾರಿಯನ್ನೇ ಆರಿಸಿಕೊಳ್ಳಿ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಸುಲಭದ ದಾರಿ ಬಿಟ್ಟು ಸರಿಯಾದ ದಾರಿಯನ್ನೇ ಆರಿಸಿಕೊಳ್ಳಿ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಧರ್ಮಶಾಸ್ತ್ರದಲ್ಲಿ ನೀರಿನ ಶುದ್ಧತೆಗೆ ವಿಶೇಷ ಒತ್ತನ್ನು ನೀಡಲಾಗಿದ್ದು, ನೀರಿಗೆ ಉಗುಳ ಬಾರದು ಎಂದು ಶಾಸ್ತ್ರ ಸೂಚಿಸುತ್ತದೆ. ಗಂಗೆಯಲ್ಲಿ ಆಚಮನ ಮಾಡಬಾರದು ಎಂಬ ನಿಯಮವೂ ಇದೆ. ನೀರನ್ನು ಮಲಿನ ಮಾಡುವವರಿಗೆ ನರಕಗಳನ್ನು ಹೇಳಲಾಗಿದೆ. ಧರ್ಮಶಾಸ್ತ್ರದ ಪಾಲನೆಯನ್ನು ದೇಶವು ಬಿಟ್ಟಿರುವುದರಿಂದ ದೇಶದ ಹಾಗೂ ನೀರಿನ ಪರಿಸ್ಥಿತಿ ದುಃಸ್ಥಿತಿಯನ್ನು ತಲುಪಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ 11.09.2026 ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಭರತನು ‘ನಾನು ರಾಮನಿಗೆ ವಂಚನೆ ಮಾಡಿದ್ದರೆ ನೀರನ್ನು ಮಲಿನ ಮಾಡಿದರೆ ಸಿಗುವ ನರಕವು ಸಿಗಲಿ’ ಎಂದು ರಾಮಾಯಣದಲ್ಲಿ ಶಪಥವನ್ನು ಮಾಡುತ್ತಾನೆ. ಇದು ಜಲ ಮೂಲಗಳ ಕುರಿತಾಗಿ ನಮ್ಮ ಪೂರ್ವಜರಿಗಿದ್ದ ಗೌರವವನ್ನು ಸೂಚಿಸುತ್ತದೆ ಎಂದು ಪ್ರಾಚೀನ ಭಾರತದಲ್ಲಿ ನೀರಿಗೆ ನೀಡಿದ್ದ ಮಹತ್ವವನ್ನು ವಿವರಿಸಿದರು.

    ಆಯುರ್ವೇದದಲ್ಲಿ ಚಂದ್ರಕಾಂತ ಮಣಿಯ ನೀರು ಬಳಕೆಗೆ ಒಳ್ಳೆಯದು ಎನ್ನಲಾಗಿದೆ. ಆದರೆ ಇಂದು ಚಂದ್ರಕಾಂತ ಮಣಿಯ ಲಭ್ಯತೆಯೇ ಕಷ್ಟಕರವಾಗಿದೆ. ನಮ್ಮ ಶಾಸ್ತ್ರಗಳಲ್ಲಿ ಸೂಚಿಸಿರುವ ಎಲ್ಲಾ ಸುವಸ್ತುಗಳು ಇಂದು ಕಣ್ಮರೆಯಾಗುತ್ತಿವೆ. ಸುವಸ್ತುಗಳನ್ನು ನಾವು ಬಳಸದೇ ಇದ್ದರೆ ಅವು ಕಣ್ಮರೆಯಾಗುತ್ತದೆ ಎಂದು ಪರಂಪರೆ ಹೇಳುತ್ತದೆ. ಹಾಗಾಗಿ ನಮ್ಮ ಪಾರಂಪರಿಕ ಗ್ರಂಥಗಳಲ್ಲಿ ಹೆಸರಿಸಿರುವ ಅನೇಕ ಸುವಸ್ತುಗಳು ಇಂದು ನಮಗೆ ಕಾಣಸಿಗುವುದಿಲ್ಲ. ಹಾಗೆಯೆ ಇನ್ನು ಕೆಲವನ್ನು ನಾವೇನಾವಾಗಿ ಅಭಿವೃದ್ಧಿಯ ಹೆಸರಿನಲ್ಲಿ ದುರಾಕ್ರಮಣಗಳ ಮೂಲಕ ಹಾಳುಮಾಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

    ಋತುಗಳಿಗೂ ನೀರಿಗೆ ಸಂಬಧವಿದ್ದು, ಹೇಮಂತ ಋತುವಿನ ನೀರು ಬಲವನ್ನು ಕೊಡುತ್ತದೆ. ಆದರೆ ಅದು ಜೀರ್ಣಕ್ಕೆ ಕಷ್ಟ, ಶಿಶಿರ ಕಾಲದ ನೀರು ಜೀರ್ಣಕ್ಕೆ ಸ್ವಲ್ಪ ಲಘು ಮತ್ತು ಕಫ ಹಾಗೂ ವಾತಗಳನ್ನು ಕಡಿಮೆ ಮಾಡುತ್ತದೆ. ವಸಂತ ಋತುವಿನ ನೀರು ಸ್ವಲ್ಪ ಸಿಹಿ ಸ್ವಲ್ಪ ಒಗರು ಹಾಗೂ ಗ್ರೀಷ್ಮ ಕಾಲದ ನೀರು ತುಂಬಾ ಒಳ್ಳೆಯದು ಎಂದು ಆಯುರ್ವೇದ ಸೂಚಿಸಿದೆ. ಹಾರೀತ ಸಂಹಿತೆಯು ನೀರನ್ನು ನಾಲ್ಕು ವಿಧವಾಗಿ ವಿಂಗಡಿಸಿದ್ದು, ಪಾಪೋದಕ, ರೋಗೋದಕ, ಅಂಶೋಧಕ ಹಾಗೂ ಆರೋಗ್ಯೋದಕ  ಎಂಬುದಾಗಿ ಸೂಚಿಸಿದೆ. ಪಾತ್ರೆಯಲ್ಲಿ ನೀರಿನ್ನು ಕಾಲು ಭಾಗಕ್ಕೆ ಆಗುವಷ್ಟು ಕುದಿಸಿದ ನೀರು ಆರೋಗ್ಯೋದಕವಾಗಿದ್ದು, ಇದು ವಾತ ದೋಷದ ನಿವಾರಣೆಯ ಜೊತೆಗೆ ಅನೇಕ ರೋಗಗಳನ್ನು ನಿವಾರಿಸುತ್ತದೆ ಹಾಗೂ ಜೀರ್ಣಾಗ್ನಿಯ ಜ್ವಲಕ್ಕೆ ಕಾರಣವಾಗುತ್ತದೆ ಎಂದು ನೀರಿನ ಅನೇಕ ವಿಭಾಗಗಳ ಕುರಿತಾಗಿ ವಿವರಿಸಿದರು.

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ದಂಪತಿಗಳು, ಉದ್ಯಮಿ ಆನಂದ್, ಹೈದರಾಬಾದಿನ ರಾಘವಲು, ಧಾರವಾಡದ ಸಿದ್ಧ ಸಮಾಧಿ ಯೋಗ ಸಮಾಜದ ಸದಸ್ಯರು ಶ್ರೀಗಳ ಆಶೀರ್ವಾದ ಪಡೆದರು. ಶೇಷಗಿರಿ ಹೆಬ್ಬಾರ್ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ದಿನಪ್ರಧಾನರಾಗಿ ಗುರುಪ್ರಕಾಶ ಹೆಗಡೆ ಕೂಜಳ್ಳಿ ದಂಪತಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸಿದ್ಧಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ: ಶ್ರೀರಾಮಚಂದ್ರಾಪುರ ಮಠಕ್ಕೆ ಪಾರಂಪರಿಕವಾಗಿ ನಡೆದುಕೊಳ್ಳುವ ಸಿದ್ದಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ನಡೆಸಿದರು. ಪಾದುಕಾ ಪೂಜೆಯನ್ನು ಸ್ವೀಕರಿಸಿ ಮಾತನಾಡಿದ ಶ್ರೀಗಳು, ಸಿದ್ದಿ ಸಮಾಜದ ಜೊತೆಗೆ ಶ್ರೀಮಠ ಇರಲಿದ್ದು, ಗುರು ಪರಂಪರೆಯ ಅನುಗ್ರಹದಿಂದ ಸಮಾಜದ ಕಷ್ಟಗಳು ಕರಗಲಿ ಎಂದು ಆಶೀರ್ವದಿಸಿದರು. ಶಿವಾನಂದ ಸಿದ್ದಿ, ನರಸಿಂಹ ಸಿದ್ದಿ, ಕೃಷ್ಣ ಸಿದ್ದಿ, ನಾರಾಯಣ ಸಿದ್ದಿ ಸೇರಿದಂತೆ ಸಮಾಜದ ಪ್ರಮುಖರು, ಗುರುಬಂಧುಗಳು ಉಪಸ್ಥಿತರಿದ್ದರು.   

    ಜೀವನದಲ್ಲಿ ನಾವು ಸುಲುಭದ ದಾರಿ ಹುಡುಕಬಾರದು. ಸರಿಯಾದ ದಾರಿಯನ್ನೇ ಆರಿಸಿಕೊಳ್ಳಬೇಕು. ಶಾಸ್ತ್ರಗಳು ಬೋಧಿಸಿರುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ಪ್ರಯತ್ನಪೂರ್ವಕವಾಗಿ ನಾವು ಜೀವನ ಪದ್ಧತಿಗಳನ್ನು ಸರಿಪಡಿಸಿಕೊಳ್ಳಬೇಕು –ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ

    12/09/2026

    ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್

    12/09/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    12/09/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.