Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    alvas nudisiri

    ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ರಷ್ಯಾದಕರೇಲಿಯಾ ಗಣರಾಜ್ಯದ ಪೆಟ್ರೋಜಾವೊಡ್ಸ್ಕ್‌ದಲ್ಲಿ ಸೆಪ್ಟೆಂಬರ್ 15 ರಿಂದ 17ರ ವರೆಗೆ ನಡೆಯಲಿರುವ ’ಬ್ರಿಕ್ಸ್ ರಾಷ್ಟ್ರಗಳ ಪ್ರಾದೇಶಿಕ ಸಹಕಾರದ ಮೂಲಕ ಪರಿಸರ ಮತ್ತು ಪ್ರಕೃತಿ ನಿರ್ವಹಣೆ’ಯ ಕುರಿತು ನಡೆಯಲಿರುವ ಮೂರನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಉಪನ್ಯಾಸ ನೀಡಲಿದ್ದಾರೆ.

    Click Here

    Call us

    Click Here

    ”ಪಶ್ಚಿಮಘಟ್ಟಗಳ ಸಂರಕ್ಷಣೆ: ಜಾಗೃತಿಯಿಂದ ಸಮುದಾಯದ ಕಾರ್ಯದತ್ತ” ಕುರಿತ ವಿಶೇಷ ಅಧಿವೇಶನದಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಸಮುದಾಯಗಳು ಹಾಗೂ ಯುವಜನರ ಪಾತ್ರವನ್ನು ವಿವರಿಸಲಿದ್ದಾರೆ. ವಿಶೇಷವಾಗಿ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಆಳ್ವಾಸ್ ಶೈಕ್ಷಣಿಕ ಪ್ರತಿಷ್ಠಾನ ಕೈಗೊಂಡಿರುವ ವಿವಿಧ ಪರಿಸರ ಸಂರಕ್ಷಣಾ ಚಟುವಟಿಕೆಗಳನ್ನು ಅವರು ಸಮ್ಮೇಳನದಲ್ಲಿ ಪರಿಚಯಿಸಲಿದ್ದು, ಪರಿಸರ ಸಂರಕ್ಷಣೆ, ಕೇವಲ ಜಾಗೃತಿಗೆ  ಮಾತ್ರ ಸೀಮಿತವಾಗದೆ, ಸಮುದಾಯದ ನೇತೃತ್ವದಲ್ಲಿ ಸಂರಕ್ಷಣಾ ಕಾರ್ಯಗಳು ನಡೆಯಬೇಕಾದ ಅಗತ್ಯವನ್ನು ಒತ್ತಿಹೇಳಲಿದ್ದಾರೆ.

    ರಷ್ಯಾದ ವಿಜ್ಞಾನ ಅಕಾಡೆಮಿಯ ಕರೇಲಿಯನ್ ಸಂಶೋಧನಾ ಕೇಂದ್ರವು ರಷ್ಯಾನ್ ಬ್ರಿಕ್ಸ್ ಸಂಶೋಧನಾ ರಾಷ್ಟ್ರೀಯ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ ಈ ಸಮ್ಮೇಳನದಲ್ಲಿ ಹವಾಮಾನ ಬದಲಾವಣೆ, ಜೀವವೈವಿಧ್ಯ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಹಾಗೂ ಪ್ರಾದೇಶಿಕ ಪರಿಸರ ಸಹಕಾರದ ಕುರಿತು ಸಂಶೋಧಕರು ಮತ್ತು ತಜ್ಞರು ಚರ್ಚಿಸಲಿದ್ದಾರೆ.

    ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಆಳ್ವಾಸ್ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ವಿನಯ್ ಶಿವಮೂರ್ತಿಯವರು ಸಮ್ಮೇಳನದಲ್ಲಿ ಮುಖ್ಯ ಭಾ?ಣ ಮಾಡಲಿದ್ದಾರೆ. ’ಮಧ್ಯ ಪಶ್ಚಿಮಘಟ್ಟಗಳ ಜಲಪರಿಸರಗಳಲ್ಲಿ ಪರಿಸರ ಹರಿವಿನ ಮೌಲ್ಯಮಾಪನದ ಮೂಲಕ ನದೀ ಪರಿಸರ ವ್ಯವಸ್ಥೆಗಳ ಸಂರಕ್ಷಣೆ’ ಎಂಬ ವಿಷಯದ ಕುರಿತು ಮಾಡಲಿದ್ದಾರೆ.

    ಸಮ್ಮೇಳನದಲ್ಲಿ ಕರ್ನಾಟಕದ ಹಲವು ಶಿಕ್ಷಣ ತಜ್ಞರು ಹಾಗೂ ಸಂಶೋಧಕರು ಭಾಗವಹಿಸಲಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆಯ ಡಾ. ಟಿ.ವಿ. ರಾಮಚಂದ್ರ, ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯ ಡಾ. ಶ್ವೇತಾ ರಂಗಸ್ವಾಮಿ ಹಾಸನ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ನಾಗರಾಜ್ ಎಸ್. ಪಾಟೀಲ್, ಚಾಣಕ್ಯ ವಿಶ್ವವಿದ್ಯಾಲಯದ ಡಾ. ಭರತ್ ಸೆಟ್ಟೂರು, ಹಳಿಯಾಳದ ವಿಡಿಐಟಿಯ ಡಾ. ವೆಂಕಟರಾಮಣ ಹೆಗ್ಡೆ ಹಾಗೂ ಬೆಳಗಾವಿಯ ಅಂಗಡಿ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯ ಡಾ. ಆನಂದ್ ದೇಶಪಾಂಡೆ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

    Click here

    Click here

    Click here

    Call us

    Call us

    ಪ್ರಾದೇಶಿಕ ಪರಿಸರ ಸಂರಕ್ಷಣೆಯ ಅನುಭವಗಳ ವಿನಿಮಯಕ್ಕೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗೆ ಸಹಯೋಗದ ಮಾರ್ಗಗಳನ್ನು ಬಲಪಡಿಸಲು ಸಮ್ಮೇಳನವು ಮಹತ್ವದ ವೇದಿಕೆಯಾಗಲಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಆರ್.ಎನ್.ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ಸಂಸ್ಕ್ರತೋತ್ಸವ ‘ಶ್ರಾವಣಿ’ ಕಾರ್ಯಕ್ರಮ

    12/09/2026

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ತಾಲೂಕು ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಸಮಾರೋಪ

    12/09/2026

    ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್: ಆಳ್ವಾಸ್‌ನ 22 ಕ್ರೀಡಾಪಟುಗಳು ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಆಯ್ಕೆ

    12/09/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.