ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ. ಪ. ಪೂ ಕಾಲೇಜು ಕುಂದಾಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು 4 ಚಿನ್ನ, 3 ಬೆಳ್ಳಿ, 1 ಕಂಚಿನ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ವಂಶಿತ್, ನಿಹಾನ್, ಅಭಿಷೇಕ್ ಹಾಗೂ ರಿತ್ವಿಕ್ ಒಟ್ಟು ನಾಲ್ಕು ವಿದ್ಯಾರ್ಥಿಗಳು ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.











