Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಭೂ ಮಾಲೀಕರಿಗೆ ಪರಿಹಾರ ಧನವನ್ನು ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆ – ತೀರ್ಥಹಳ್ಳಿವರೆಗಿನ ಕಾಮಗಾರಿ ಜಿಲ್ಲೆಯಲ್ಲಿ ಅಂತಿಮ ಹಂತದಲ್ಲಿದೆ. ಆದರೆ ಕಾಮಗಾರಿ ನಡೆಯುತ್ತಿರುವ ಕೆಲವು ಕಡೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯು ಪೂರ್ಣ ಪ್ರಮಾಣದಲ್ಲಿ ಆಗದ ಕಾರಣ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಭೂ ಸ್ವಾಧೀನ  ಕಾರ್ಯಗಳನ್ನು ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರರ ಇಲಾಖೆಯವರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಪೂರ್ಣಗೊಳಿಸಬೇಕು ಎಂದರು.

    ಭೂ ಮಾಲೀಕರಿಗೆ ವೈಜ್ಞಾನಿಕವಾಗಿ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗುತ್ತಿರುವುದು ಸರಿಯಲ್ಲ. ಪದೇ ಪದೇ ಸಭೆ ಕರೆದು ಸಮಸ್ಯೆ ಬಗ್ಗೆ ಚರ್ಚಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಾಗುತ್ತಿರುವುದು ಸರಿಯಲ್ಲ ಎಂದರು.

    ನೆನೆಗುದಿಗೆ ಬಿದ್ದಿರುವ ಪರ್ಕಳ ಭೂಸ್ವಾಧೀನ ಪ್ರಕ್ರಿಯೆಯಲ್ಲಿ 8.25 ಕೋಟಿ ರೂ. ಅನ್ನು ಕೋರ್ಟ್ಗೆ  ಜಮಾ ಮಾಡಲಾಗಿದೆ. 13 ಜನರಿಗೆ ಸಂಬಂಧಿಸಿದ 419 ಮೀ ನಲ್ಲಿ ಒಬ್ಬರು ಮಾತ್ರ ಕೋರ್ಟ್ಗೆ ಹೋಗಿದ್ದು, ಈ ಬಗ್ಗೆ ಮರು ಸರ್ವೆ ಮಾಡಿ ಸಮಸ್ಯೆ ಇತ್ಯರ್ಥಗೊಳಿಸಿ ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಿದರು.

    ಹಿರಿಯಡ್ಕದಿಂದ ಪೆರ್ಡೂರು ವರೆಗೆ ಬಾಕಿ ಇದ್ದ 2.69 ಕಿಲೋ ಮೀಟರ್ ಸ್ವಾಧೀನವಾಗಿದೆ. ಹೆಬ್ರಿ ಪಾಡಿಗಾರ ಪ್ರದೇಶದಲ್ಲಿ 1.4 ಕಿ.ಮೀ ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ಮರ ಕಡಿಯಲು ಅನುಮತಿ ನೀಡಲಾಗಿದೆ ಆದರೆ ಮರ ತೆರವು ಕಾರ್ಯ ಬಾಕಿ ಇದೆ. ಮರಗಳ ತೆರವು ಕಾರ್ಯವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪೂರ್ಣಗೊಳಿಸಬೇಕೆಂದು ದೂರವಾಣಿ ಮೂಲಕ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಹೆಬ್ರಿಯಿಂದ ಆಗುಂಬೆ ಘಾಟಿವರೆಗೆ ಕಾಮಗಾರಿಗೆ 72 ಕೋಟಿ ಬಿಡುಗಡೆ ಯಾಗಿದೆ. ಹೆಬ್ರಿ ಬಳಿಕ ಆಗುಂಬೆ ವರೆಗೆ ಕಾಮಗಾರಿಗೆ ಡಿ.ಪಿ.ಆರ್ ಅನ್ನು ತ್ವರಿತವಾಗಿ ತಯಾರಿಸಿ, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಭೂ ಸ್ವಾಧೀನ ಆದ ಭೂ ಮಾಲೀಕರಿಗೆ ನೋಟಿಸ್ ನೀಡಿ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ. ವಿನಾಕಾರಣ ಕಾಮಗಾರಿಯಲ್ಲಿ ವಿಳಂಬ ತೋರಿಸಬಾರದು ಎಂದರು. ಕಲ್ಮಾಡಿಯಿಂದ ಮಲ್ಪೆ ಹಾರ್ಬರ್ ವರೆಗಿನ 1.18 ಕಿಲೋ ಮೀಟರ್ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ನಾಳೆಯಿಂದಲೇ ಕಾಮಗಾರಿ ಪ್ರಾರಂಭಿಸಬೇಕೆಂದು ಅಭಿಯಂತರರಿಗೆ ಸೂಚನೆ ನೀಡಿದರು.

    ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ರಾ. ಹೆದ್ದಾರಿಯಲ್ಲಿ ಜಾಗ ಕಳೆದುಕೊಂಡಿರುವ ಮತ್ತು ಪರಿಹಾರ ಧನ ಪಾವತಿಸಲು ಬಾಕಿ ಇರುವವರ ಪಟ್ಟಿ ತಯಾರಿಸಿ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅವರ ಜೊತೆ ಚರ್ಚಿಸಿ ಸಮಸ್ಯೆ ಪರಿಹರಿಸಲು ತಿಳಿಸಿದರು.

    ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ಅಪರ ಜಿಲ್ಲಾಧಿಕಾರಿ ಅಬೀüದ್ ಗದ್ಯಾಳ, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಶೃಂಗೇರಿ- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವಿದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    16/09/2026

    ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ

    12/09/2026

    ಉಡುಪಿ: ಸೆ.16ರಂದು ಖಾಸಗಿ ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    12/09/2026
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ
    • ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ
    • ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ
    • ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು
    • ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವಿದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.