Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವದ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವದ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸೇವೆ ಮಾಡುವ ಕಾಯಕ ಭಗವಂತನಿಚ್ಛೆ. ನಾನು ಇಲ್ಲಿ ಮಧ್ಯವರ್ತಿ ಅಷ್ಟೆ ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಹದ್ದಿನಬೆಟ್ಟು ಅಧ್ಯಕ್ಷ ಅವಿನಾಶ್ ಶೆಟ್ಟಿ ಗುಂಡ್ಮಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಸೋಮವಾರ ಇಲ್ಲಿನ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ವತಿಯಿಂದ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ತನ್ನ ಫೌಂಡೇಶನ್ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವುದರ ಜತೆಗೆ ಸಾಮಾಜಿಕ ಕಾರ್ಯದೊಂದಿಗೆ   ಗಣೇಶೋತ್ಸವ ಕಾರ್ಯಕ್ರಮ ಹದ್ದಿನಬೆಟ್ಟಿನಲ್ಲಿ ಸರ್ವಧರ್ಮ ಸಮನ್ವಯ ಕೇಂದ್ರವಾಗಿ ರೂಪುಗೊಂಡು ಸಾಮರಸ್ಯ ಜೀವನಕ್ಕೆ ಮುನ್ನುಡಿ ಬರೆಯುತ್ತಿರುವುದು ಉತ್ಸವದ ಮೆರಗನ್ನು ಹೆಚ್ಚಿಸಿದೆ ಎಂದರು.

    ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ 50ಸಾವಿರ ನಗದು ಪುರಸ್ಕಾರದೊಂದಿಗೆ ಶ್ರೀ ಗಣೇಶ ಆರಾಧನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಹಾಜಬ್ಬ ಮಾತನಾಡಿ, ನಮ್ಮೂರಿನ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂಬ ಇಚ್ಛೆಯಿಂದ ಕಿತ್ತಳೆ ಮಾರಿ ಶಾಲೆ ಕಟ್ಟದ್ದೇನೆ ಆಗಿನ ಶಾಸಕ ಯು.ಟಿ ಫರೀದ್ ಸೇರಿದಂತೆ ಅನೇಕ ಜನರು ಕೈಜೋಡಿಸಿದರು.ಇಂದು ಇಲ್ಲಿನ‌ ಪ್ರಶಸ್ತಿ ಶೈಕ್ಷಣಿಕ ಕಾರ್ಯಕ್ಕೆ ವೇಗ ನೀಡಿದೆ ಎಂದರು.

    ಯುವ ಕಲಾವಿದ ನಿರಜ್ ಹರೇಕಳ ಹಾಜಬ್ಬರಿಗೆ ತಾವು ರಚಿಸಿದ ಚಿತ್ರವನ್ನು ಹಸ್ತಾಂತರಿಸಿದರು. ಸಾನ್ವಿ ಗ್ರೂಪ್ ಅವಿನಾಶ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಶೈಕ್ಷಣಿಕ ದತ್ತುಸ್ವೀಕಾರ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯ  30 ವಿದ್ಯಾರ್ಥಿಗಳಿಗೆ  5 ಸಾವಿರ ರೂ.ಗಳಂತೆ ವಿದ್ಯಾರ್ಥಿ ವೇತನ ವಿತರಣೆ,ಎರಡು ಸ್ಥಳೀಯ ಸರಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ  ಒಂದು ವರ್ಷದ ಮಾಸಿಕ ಗೌರವ ವೇತನ, 6 ಜನ ಅನಾರೋಗ್ಯ ಪೀಡಿತರಿಗೆ ಸಹಾಯನಿಧಿ ವಿತರಣೆ ಜತೆಗೆ ಹಲವು ಸಾಮಾಜಿಕ ಕಾರ್ಯಗಳು ಈ ವೇದಿಕೆಯಲ್ಲಿ ನೀಡಲಾಯಿತು.

    Click here

    Click here

    Click here

    Call us

    Call us

    ಉತ್ಸವದ ಅಂಗವಾಗಿ ಹಮ್ಮಿಕೊಂಡ ಕ್ರೀಡಾ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ಎಸ್ ಎಂಎಸ್ ಕಾಲೇಜಿನ ಪ್ರಾಂಶುಪಾಲ ಡಾ. ರಾಬರ್ಟ್ ರೋಡ್ರಿಗಸ್ ವಹಿಸಿ ಶುಭಹಾರೈಸಿದರು.

    ಮುಖ್ಯ ಅಭ್ಯಾಗತರಾಗಿ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ರಥಶಿಲ್ಪಿ ರಾಜಗೋಪಾಲ್ ಆಚಾರ್ಯ ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ಚಂದ್ರ ಮೊಗವೀರ  ಸ್ವಾಗತಿಸಿ, ಬಹುಮಾನ ಪತ್ರ ವಾಚಿಸಿ ವಂದಿಸಿದರು. ಸಮಿತಿಯ ಸೂರಜ್ ವಿಧ್ಯಾರ್ಥಿವೇತನದ ಪಟ್ಟಿ ವಾಚಿಸಿದರು. ಅಶೋಕ್ ಭಂಡಾರಿ ಲೆಕ್ಕಪತ್ರ ವಾಚಿಸಿದರು. ಸಮಿತಿಯ ಗೌರವಾಧ್ಯಕ್ಷ ರಾಮದೇವ ಐತಾಳ್ ಪ್ರಶಸ್ತಿ ಪತ್ರ ವಾಚಿಸಿ ನಿರೂಪಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ

    16/09/2026

    ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ

    16/09/2026

    ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು

    16/09/2026
    Leave A Reply Cancel Reply

    four × 4 =

    Call us

    Click Here

    Call us

    Call us

    Call us
    Highest Viewed Recently
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ
    • ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ
    • ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ
    • ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು
    • ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವಿದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.