ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ 22 ಗ್ರಾಂ ತೂಕದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ ಘಟನೆ ಸಂಭವಿಸಿದೆ.
ಬೈಂದೂರು ತಾಲೂಕಿನ ನಾಡ ಗ್ರಾಮದ ನಿವಾಸಿ ಮುತ್ತು (75) ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ.
ಅವರು ಚೌತಿ ಹಬ್ಬದ ಪ್ರಯುಕ್ತ ಆನೆಗುಡ್ಡೆ ಗಣಪತಿ ದೇವಸ್ಥಾನಕ್ಕೆ ಹೋಗಿದ್ದು, ದೇವಸ್ಥಾನದ ಒಳಗೆ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಪಡೆದುಕೊಂಡು ಪ್ರದಕ್ಷಿಣೆ ಬರುತ್ತಿದ್ದ ವೇಳೆ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕಳವಾದ ಚಿನ್ನದ ಸರದ ಒಟ್ಟು ಮೌಲ್ಯ ಸುಮಾರು 2,50,000 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















