ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಮುಜರಾಯಿ, ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಬುಧವಾರ ಬೆಳಗ್ಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಪೂಜೆಯ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ವೇಳೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ , ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ , ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ , ರಘುರಾಮ ದೇವಾಡಿಗ , ಧನಾಕ್ಷಿ ಪೂಜಾರಿ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಫೂರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.











