Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ
    ಗಲ್ಫ್

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕತಾರ್:
    ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತನ ಕಾಯಕಲ್ಪದೊಂದಿಗೆ ಪುನರಾರಂಭಿಸಲಾಗಿದೆ.

    Click Here

    Call us

    Click Here

    ಶಿಕ್ಷಕರು ಮತ್ತು ಪೋಷಕರಿಗೆ ವಿಶೇಷ ತರಬೇತಿ ಕಾರ್ಯಾಗಾರ:
    ಕನ್ನಡ ಪಾಠಶಾಲೆಯ ಶಿಕ್ಷಕರು ಹಾಗೂ ಪೋಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ನಡೆಸಿಕೊಟ್ಟರು. ಮಕ್ಕಳ ವಯಸ್ಸು ಮತ್ತು ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಕನ್ನಡವನ್ನು ಪರಿಣಾಮಕಾರಿಯಾಗಿ ಬೋಧಿಸುವ ವಿಧಾನಗಳು, ಪಠ್ಯಕ್ರಮವನ್ನು ವ್ಯವಸ್ಥಿತವಾಗಿ ಅಳವಡಿಸಿಕೊಳ್ಳುವ ಕ್ರಮಗಳು ಹಾಗೂ ಮಕ್ಕಳಲ್ಲಿ ಕನ್ನಡ ಕಲಿಕೆಯ ಆಸಕ್ತಿ ಹೆಚ್ಚಿಸುವ ಬೋಧನಾ ತಂತ್ರಗಳ ಕುರಿತು ಅವರು ಮಾರ್ಗದರ್ಶನ ನೀಡಿದರು.

    ಶಿಕ್ಷಕರ ದಿನಾಚರಣೆಯಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭ:
    ಕರ್ನಾಟಕ ಸಂಘ ಕತಾರ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಡಾ. ಪುರುಷೋತ್ತಮ ಬಿಳಿಮಲೆ ಅವರ ಸಮ್ಮುಖದಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭವನ್ನು ಅಧಿಕೃತವಾಗಿ ಘೋಷಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡದ ಸೇವೆಯನ್ನು ಸ್ವಯಂಪ್ರೇರಿತವಾಗಿ ಸಲ್ಲಿಸುತ್ತಿರುವ ಶಿಕ್ಷಕರ ಕೊಡುಗೆಯನ್ನು ಶ್ಲಾಘಿಸಲಾಯಿತು.

    ಕನ್ನಡ ಪಾಠಶಾಲೆಯನ್ನು ಪುನರಾರಂಭಿಸುವ ಈ ಮಹತ್ವದ ಕಾರ್ಯವನ್ನು ಸಾಕಾರಗೊಳಿಸಲು ಕರ್ನಾಟಕ ಸಂಘ ಕತಾರ್‌ನ ನಿರ್ವಹಣಾ ಸಮಿತಿಯ ಸದಸ್ಯರು ವಿಶೇಷ ಆಸಕ್ತಿ, ಸಮಯ ಮತ್ತು ಶ್ರಮವನ್ನು ವಹಿಸಿ, ನಿರಂತರವಾಗಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ಕನ್ನಡದ ಮೇಲಿನ ಕಾಳಜಿ ಹಾಗೂ ಮುಂದಿನ ಪೀಳಿಗೆಗೆ ಕನ್ನಡವನ್ನು ತಲುಪಿಸುವ ಬದ್ಧತೆಯಿಂದ ಸಮಿತಿಯ ಈ ಪ್ರಯತ್ನ ಮಹತ್ವದ್ದಾಗಿದೆ.

    ನಿಯಮಿತ ತರಗತಿಗಳಿಗೆ ಅಧಿಕೃತ ಚಾಲನೆ:
    ಕನ್ನಡ ಪಾಠಶಾಲೆಯ ನಿಯಮಿತ ತರಗತಿಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶ್ರೀ ಶಶಿಧರ್ ಹೆಚ್. ಬಿ. ಅವರು ಸ್ವಾಗತ ಭಾಷಣ ಮಾಡಿದರು.

    ಈ ಸಂದರ್ಭದಲ್ಲಿ ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು, ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ ಶೆಟ್ಟಿ, ಮಾಜಿ ಅಧ್ಯಕ್ಷರಾದ ಎಚ್. ಕೆ. ಮಧು, ಉಪಾಧ್ಯಕ್ಷರಾದ ಅನಿಲ್ ಭಾಸಗಿ, ನಿರ್ವಹಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

    ಗಣ್ಯರು ತಮ್ಮ ಮಾತುಗಳಲ್ಲಿ ಕನ್ನಡ ಭಾಷೆಯ ಇತಿಹಾಸ, ಕನ್ನಡಿಗರ ಹೆಮ್ಮೆ ಹಾಗೂ ಮಾತೃಭಾಷೆಯ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರೋತ್ಸಾಹ ನೀಡಿದರು.

    ಮಕ್ಕಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸುವುದರ ಜೊತೆಗೆ, ಎಲ್ಲ ಮಕ್ಕಳು ಸಮಾನರು ಎಂಬ ಭಾವನೆಯನ್ನು ಬೆಳೆಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ವತಿಯಿಂದ ಕನ್ನಡ ಪಾಠಶಾಲೆಯ ಎಲ್ಲಾ ಮಕ್ಕಳಿಗೂ ಒಂದೇ ರೀತಿಯ ಟಿ-ಶರ್ಟ್‌ಗಳು ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಈ ಮೂಲಕ ಮಕ್ಕಳಲ್ಲಿ ಒಗ್ಗಟ್ಟು, ಸಮಾನತೆ ಹಾಗೂ ಕನ್ನಡದೊಂದಿಗೆ ಆತ್ಮೀಯತೆಯನ್ನು ಬೆಳೆಸುವ ಪ್ರಯತ್ನ ಮಾಡಲಾಯಿತು.

    ಕನ್ನಡ ಪಾಠಶಾಲೆಯ ತರಗತಿಗಳು ಪ್ರತೀ ಶುಕ್ರವಾರ ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು, ಮಕ್ಕಳ ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಮೂರು ಹಂತಗಳಲ್ಲಿ ತರಗತಿಗಳನ್ನು ಆಯೋಜಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದೆ.

    ಕತಾರ್‌ನಲ್ಲಿ ನೆಲೆಸಿರುವ ಹೆಚ್ಚಿನ ಸಂಖ್ಯೆಯ ಕನ್ನಡಿಗರು ತಮ್ಮ ಮಕ್ಕಳನ್ನು ಕನ್ನಡ ಪಾಠಶಾಲೆಗೆ ದಾಖಲಿಸಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯೊಂದಿಗೆ ಅವರ ನಂಟನ್ನು ಇನ್ನಷ್ಟು ಗಟ್ಟಿಗೊಳಿಸುವಂತೆ ಕರ್ನಾಟಕ ಸಂಘ ಕತಾರ್ ಮನವಿ ಮಾಡಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಸಂಘ ಕತಾರ್‌ ವತಿಯಿಂದ ಶಿಕ್ಷಕರ ದಿನಾಚರಣೆ

    11/09/2026

    ಜಾನಕಿ ಸ್ಮೃತಿ: ದೋಹಾದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಗಾನ ನಮನ

    08/09/2026

    ಕರ್ನಾಟಕ ಸಂಘ ಕತಾರ್‌: 80ನೇ ಸ್ವಾತಂತ್ರ್ಯೋತ್ಸವ

    18/08/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ
    • ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ
    • ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ
    • ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು
    • ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವಿದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.