ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ನಡೆಯಲಿದ್ದು ರಾಜ್ಯದ ಮುಖ್ಯಮಂತ್ರಿ ಅಭಿವೃದ್ಧಿ ಬೇಕಾದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ರಾಜ್ಯದ ಬಂದರು ಮತ್ತು ಮೀನುಗಾರಿಕಾ, ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ಅವರು ಬುಧವಾರ ಕೋಟದ ಅಮೃತೇಶ್ವರೀ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕರಾವಳಿ ಭಾಗದ ಮೂಲ ವೃತ್ತಿ ಮೀನುಗಾರಿಕೆಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಅಲ್ಲದೆ ಪ್ರವಾಸೋದ್ಯಮ ಉತ್ತೇಜನ ದೇಗುಲಗಳ ಅಭಿವೃದ್ಧಿ ಕುರಿತಂತೆ ಕಾರ್ಯತಂತ್ರ ರೂಪಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವರಿಗೆ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಗೌರವಿಸಿ ಪ್ರಸಾದ ವಿತರಿಸಿದರು.
ದೇಗುಲ ಟ್ರಸ್ಟಿಗಳಾದ ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ಸುಬ್ರಾಯ ಜೋಗಿ, ರತನ್ ಐತಾಳ್, ಸುಧಾ ಪೂಜಾರಿ, ಜ್ಯೋತಿ ಕಾಂಚನ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ತಿಮ್ಮಪೂಜಾರಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ.ಎ ಗಫೂರ್, ರಾಜು ಪೂಜಾರಿ, ಅಜಿತ್ ಶೆಟ್ಟಿ, ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣಕಾಂಚನ್, ಸಿಇಒ ಶರತ್ ಕುಮಾರ್ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
















