ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಹೊನ್ನಾರಿ ಯುವಕ ಮಂಡಲದ ನೇತೃತ್ವದಲ್ಲಿ ಹೊನ್ನಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಗಿಳಿಯಾರು ಮೈನಾಡಿ ಮನೆ ದಿ. ಭರತ್ ಕುಮಾರ್ ಶೆಟ್ಟಿ ಅವರ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಹಾಗೂ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ ಭಾನುವಾರ ಏರ್ಪಡಿಸಲಾಯಿತು.
ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕುಂದಾಪುರದ ಶಾಸಕ ಕಿರಣ ಕುಮಾರ್ ಕೊಡ್ಗಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ್ ಗಿಳಿಯಾರು, ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮುದ್ದುಮನೆ ಇದರ ಶಂಕರ ಶೆಟ್ಟಿ, ಸಮಾಜಸೇವಕ ಕೇಶವ ಕೋಟೇಶ್ವರ, ನಿವೃತ್ತ ಮುಖ್ಯ ಶಿಕ್ಷಕ ಭೋಜ ಶೆಟ್ಟಿ,ಕೋಟ ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಮತ್ತು ಹೊನ್ನಾರಿ ಯುವಕಮಂಡಲದ ಅಧ್ಯಕ್ಷ ಪ್ರವೀಣ್ ಕುಮಾರ್ ಜೋಗಿ ಉಪಸ್ಥಿತರಿದ್ದರು.
ಆರೋಗ್ಯ ಶಿಬಿರದಲ್ಲಿ ರಕ್ತಪರೀಕ್ಷೆ ಸೇರಿದಂತೆ ಅನೇಕ ತಪಾಸಣೆಯಲ್ಲಿ ಸ್ಥಳೀಯರು ಭಾಗಿಯಾದರು.
















