ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಿತಿನ್ ಕುಸ್ತಿ ಅಖಾಡದಲ್ಲಿ ಅಮೋಘ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾನೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕುಸ್ತಿ ಪಟು ಆಗಿರುವ ಕೃಷ್ಣ ವಿದ್ಯಾರ್ಥಿಗೆ ತರಬೇತಿ ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಸಾಧನೆಯನ್ನು ಪ್ರಶಂಸಿಸಿದ್ದಾರೆ.











