ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ವಕ್ವಾಡಿ ಗ್ರಾಮದ ತೆಂಕಬೆಟ್ಟು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆ ಸವಿತಾ (36) ಎಂದು ಗುರುತಿಸಲಾಗಿದೆ.
ಅವರು ಸುಮಾರು 10 ವರ್ಷಗಳಿಂದ ಬೆನ್ನುನೋವು ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಸೆ. 15ರ ರಾತ್ರಿ 12 ಗಂಟೆಗೆ ಮನೆಯಲ್ಲಿ ಮಲಗಿದ್ದ ಅವರು, ಬೆಳಗ್ಗೆ ಮನೆಯಲ್ಲಿ ಕಾಣಿಸಿರಲಿಲ್ಲ ಕುಟುಂಬಸ್ಥರು ಹುಡುಕಾಡಿದಾಗ ಮನೆಯ ಮಹಡಿಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬಾಯಿ ಮತ್ತು ಮೂಗಿನಿಂದ ನೊರೆ ಮಿಶ್ರಿತ ದ್ರವ ಹೊರಬರುತ್ತಿದ್ದು ಪಕ್ಕದಲ್ಲಿ ವಿಷದ ಬಾಟಲಿ ಪತ್ತೆಯಾಗಿತ್ತು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















