ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಸುಪ್ರೀಂ ಟೈಲ್ಸ್ ನ ಆಡಳಿತ ನಿರ್ದೇಶಕರಾದ ಕೆ. ಜಯಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಹಾಗೆಯೇ ಕಾರ್ಯಕ್ರಮದ ಆಯೋಜನೆ ಕುರಿತು ಮೆಚ್ಚುಗೆ ಮಾತುಗಳನ್ನಾಡಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಶುಭಕೋರಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಸಂಯೋಜಕರಾದ ಹರೀಶ್ ಬಿ. ಹಾಗೂ ಅವಿತಾ ಕೊರೆಯಾ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಂತಿಮ ಬಿ.ಬಿ.ಎ ರಾಕೇಶ್ ಹಾಗೂ ರಾಜೇಶ್ವರಿ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕರಾದ ರವಿನಂದನ್ ಭಟ್ ವಿಜೇತರ ಪಟ್ಟಿಯನ್ನು ವಾಚಿಸಿದರು. ಸೆಪ್ಟೆಂಬರ್ 11 ಮತ್ತು 12ರಂದು ನಡೆದ ಈ ಇಂಟರ್ ಕಂಪೆನಿ ಸ್ಪರ್ಧೆಯಲ್ಲಿ 15 ತಂಡಗಳು ಭಾಗವಹಿಸಿದ್ದು, ಡ್ರೀಮ್ ಬಿಲ್ಡರ್ಸ್ ತಂಡ ಚಾಂಪಿಯನ್ ಆಗಿ ಮೂಡಿ ಬಂದಿತು. “ಡೈನಾಮಿಕ್ ಥಿಂಕರ್ಸ್ ತಂಡ ರನ್ನರ್ ಅಪ್ ಪ್ರಶಸ್ತಿ ಹಾಗೂ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಗೇಮ್ ಚೇಂಜರ್ಸ್ ತಂಡ ಪಡೆದುಕೊಂಡಿತ್ತು.
ಇದೇ ಸಂದರ್ಭದಲ್ಲಿ ಪಿ.ಜಿ.ಸಿ.ಇ.ಟಿ ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಂತಿಮ ಬಿ.ಬಿ.ಎ ವಿದ್ಯಾರ್ಥಿಗಳಾದ ಸಚಿನ್ ಸ್ವಾಗತಿಸಿ, ಪ್ರದೀಪ್ ಅತಿಥಿಗಳನ್ನು ಪರಿಚಯಿಸಿ, ರಕ್ಷಿತಾ ವಂದಿಸಿ, ಸವಿಕ್ಷಾ ನಿರೂಪಿಸಿದರು.
















