ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
17ರ ವಯೋಮಾನದ ಪ್ರೌಢಶಾಲಾ ವಿಭಾಗದಲ್ಲಿ ಮುತ್ತು ಸಿದ್ದಪ್ಪ ನಾವಿ ಹಾಗೂ ಸಾಹಿತ್ಯ ಅಡಿಗ ಅವರು 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದರೆ, ಸೃಷ್ಟಿ. ಎಚ್. ತೋಳಾರ್ 100 ಮೀಟರ್ ಓಟದಲ್ಲಿ ಹಾಗೂ ಸಂಪ್ರೀತ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಅದೇ ವಿಭಾಗದಲ್ಲಿ ಆಕಾಶ್ ಪೂಜಾರಿ ಅವರು 100 ಮೀಟರ್ ಓಟ, 200 ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ವೈಯಕ್ತಿಕ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡಿದ್ದಾರೆ. ಅವರ ಈ ಸಾಧನೆ ಶಾಲೆಯ ಕ್ರೀಡಾ ಪ್ರತಿಭೆಗೆ ಮತ್ತೊಂದು ಗರಿಮೆ ತಂದಿದೆ.
ಇದೇ ವಿಭಾಗದಲ್ಲಿ ಸಮಿತ್ ಶೆಟ್ಟಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, ಸಾಯಿಪ್ರಸಾದ್ ಎಸ್. ಮೊಗವೀರ 800 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ರಿದಾ ಪರ್ವಿನ್ 800 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.
14ರ ವಯೋಮಾನದ ವಿಭಾಗದಲ್ಲಿಯೂ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಆಯೇಷಾ ನಾಜಿಹ ಚಕ್ರ ಎಸೆತದಲ್ಲಿ ಹಾಗೂ ಸಂಜನಾ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸುಹಾಸ್. ಭಟ್ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ಸಂಜನಾ 80 ಮೀಟರ್ ಹರ್ಡಲ್ಸ್‌ನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.
ತಂಡ ವಿಭಾಗದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. 17ರ ವಯೋಮಾನದ ಬಾಲಕರ ರಿಲೇಯಲ್ಲಿ ಆಕಾಶ್ ಪೂಜಾರಿ, ಸಾಯಿಪ್ರಸಾದ್. ಎಸ್. ಮೊಗವೀರ, ಕಿಶನ್ ಶೆಟ್ಟಿ ಹಾಗೂ ಸಂಪ್ರೀತ್ ಅವರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. 14ರ ವಯೋಮಾನದ ಬಾಲಕರ ರಿಲೇಯಲ್ಲಿ ಯಶ್, ಸುಹಾಸ್ ಭಟ್, ಪರೀಕ್ಷಿತ್ ಭೋವಿ ಹಾಗೂ ಮಹಮ್ಮದ್ ಸುಫಿಯಾನ್ ಅವರ ತಂಡ ದ್ವಿತೀಯ ಸ್ಥಾನ ಗಳಿಸಿದೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಕ್ರೀಡಾಕೂಟಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
















