ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ ಕೃಷಿ ಇಲಾಖಾ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ/ಕೃಷಿ ಪಂಡಿತ ಯೋಜನೆಯಡಿ ಪ್ರತಿ ಹಂತದಲ್ಲಿ 3 ಬಹುಮಾನಗಳನ್ನು ನೀಡಲಾಗುತ್ತಿದೆ.
ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಪಡೆಯಲಾಗುತ್ತಿದ್ದು ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್‌ನಡಿ RSK Loginಅಥವಾ Citizen Loginಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಕೇಂದ್ರ/ಸ್ವತಃ ಆಸಕ್ತ ರೈತ/ರೈತ ಮಹಿಳೆಯರು ಪ್ರತ್ಯೇಕವಾಗಿ ರೈತರ FID ಅನ್ನು ಬಳಸಿಕೊಂಡು ಆನ್ ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.











