ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸ್ಟೆಲಾ ಮ್ಯಾರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ 14 ವರ್ಷದ ಬಾಲಕ- ಬಾಲಕಿಯರ ನೆಟ್‌ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ.

ಬಾಲಕರ ತಂಡದಲ್ಲಿ ಸಮರ್ಥ್, ಸಮರ್ಥ್ ಖಾರ್ವಿ, ವೈಭವ್, ನಾಗರಾಜ್, ಅರವ್, ವಿಗ್ನೇಶ್, ಯಶ್ವಿಕ್, ಮೌನೇಶ್, ನಿಯಾನ್ ಮತ್ತು ಬಾಲಕಿಯರ ತಂಡದಲ್ಲಿ ಮನ್ವಿತಾ, ಸನ್ನಿಧಿ, ಶ್ರೀ ಲಕ್ಷ್ಮಿ, ಅಪೇಕ್ಷಾ, ಧನ್ಯ ಖಾರ್ವಿ, ಸನ್ನಿಧಿ ಖಾರ್ವಿ, ಶ್ರಾವಣಿ, ಅನ್ವಿತಾ, ಆಶೀತಾ ಖಾರ್ವಿ, ಅದಿತಿ ಪ್ರತಿನಿಧಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದರು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ವೃಂದ ಮತ್ತು ಶಿಕ್ಷಕ-ರಕ್ಷಕ ಸಮಿತಿ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದರು.











