ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಮತ್ತು ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ “ಕುಸ್ತಿ ಪಂದ್ಯಾಟ”-2026 ಉದ್ಘಾಟನಾ ಸಮಾರಂಭ ನಡೆಯಿತು .
“ಕುಸ್ತಿ ಪಂದ್ಯಾಟ-2026″ದ ಅಂತಿಮ ಪಂದ್ಯದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಜಯಗಳಿಸಿತು . ಬ್ರಹ್ಮಾವರದ ಎಸ್.ಎಮ್.ಎಸ್ ಪದವಿಪೂರ್ವ ಕಾಲೇಜು ರನ್ನರ್ ಆಫ್ ಸ್ಥಾನ ಪಡೆಯಿತು
ಬ್ರಹ್ಮಾವರ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕುಸ್ತಿ ಆಟವು ಭಾರತದ ಸಾಂಸ್ಕೃತಿಕ ಕಲೆಯಾಗಿದೆ . ಇಂತಹ ಪಂದ್ಯಾಟಗಳ ಮೂಲಕ ಕುಸ್ತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕರ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಕುಂದಾಪುರ ಪದವಿಪೂರ್ವ ವಿಭಾಗದ ಕ್ರೀಡಾ ಸಂಯೋಜಕರಾದ ರಾಮ ಶೆಟ್ಟಿ, ಗಂಗೊಳ್ಳಿ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಭಂಡಾರ್ಕರ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ.ಎಮ್. ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ಪ್ರಭು ವಂದಿಸಿದರು. ವಿದ್ಯಾರ್ಥಿನಿ ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
















