Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್‌ ಉದ್ಯೋಗ ಮೇಳ ಸಂಪನ್ನ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್‌ ಉದ್ಯೋಗ ಮೇಳ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸ್ಥಳೀಯ ಐ.ಎಂ.ಜೆ. ಶಿಕ್ಷಣ ಸಂಸ್ಥೆ ಮೂಡಲಕಟ್ಟೆಯಲ್ಲಿ ಕರ್ನಾಟಕ ಸರ್ಕಾರ, ಮೈಕ್ರೋಸಾಫ್ಟ್, ಕೇಂದ್ರ ಸರ್ಕಾರದ MeitY ಸ್ಟಾರ್ಟ್‌ಅಪ್ ಹಬ್ ಮತ್ತು 1M1B ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಉದ್ಯೋಗ ಮೇಳ ‘ಜಾಬ್ ಎಕ್ಸ್‌ಪ್ರೆಸ್ 2K26’ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸ್ಪಂದನೆ ದೊರೆಯಿತು.

    Click Here

    Call us

    Click Here

    ಕಾರ್ಯಕ್ರಮದ ಉದ್ಘಾಟಕರಾಗಿ  ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್‌ನ ಆರ್ಕಿಟೆಕ್ಟ್ ಡಾ. ಸ್ಯಾಮ್ಯುಯೆಲ್ ಅಗಸ್ಟಸ್ ನಾರ್ಟನ್ ಸ್ಟಾನ್ಲಿ ಅವರು ಆಗಮಿಸಿದ್ದು, ಇಂದಿನ ತಂತ್ರಜ್ಞಾನ ಯುಗದಲ್ಲಿ ಪರಿಸರ ಸ್ನೇಹಿ ಕೌಶಲಗಳು ಹಾಗೂ ಕೃತಕ ಬುದ್ಧಿಮತ್ತೆ (AI) ಜ್ಞಾನಕ್ಕೆ ಅಪಾರ ಬೇಡಿಕೆಯಿದ್ದು, ಯುವಜನತೆ ನಿರಂತರ ಕಲಿಕೆಯೊಂದಿಗೆ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಉದ್ಯೋಗಾಕಾಂಕ್ಷಿಗಳಿಗೆ ಕರೆ ನೀಡಿದರು. 

    ಗೌರವ ಅತಿಥಿಯಾಗಿ ಉಪಸ್ಥಿತರಿದ್ದ  ರೇಮಾ ಜೋಸೆಫ್, ಮುಖ್ಯಸ್ಥರು ಮತ್ತು ಹಿರಿಯ ಮಾರ್ಗದರ್ಶಕರು, ಗ್ರೀನ್ ಸ್ಕಿಲ್ಸ್ & ಅಪ್ಲೈಡ್ ಎಐ ಫಾರ್ ಕ್ಲೈಮೇಟ್ ಆಕ್ಷನ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆಯಿದ್ದು, ಅವರನ್ನು ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಸಂಪರ್ಕಿಸುವ ವೇದಿಕೆ ಇದಾಗಿದೆ ,ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಹಾಗೂ ಉತ್ತಮ ವೃತ್ತಿ ಅವಕಾಶಗಳನ್ನು ಕಲ್ಪಿಸಿಕೊಡಲು ನಮ್ಮ ಸಂಸ್ಥೆ ಎಲ್ಲಾ ರೀತಿಯಲ್ಲೂ ಸದಾ ಬೆಂಬಲ ನೀಡಲು ಬದ್ಧವಾಗಿದೆ ಎಂದರು.

    ಸಂಸ್ಥೆಯ ಅಕಾಡೆಮಿಕ್ಸ್ ವಿಭಾಗದ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿ ಗಣ್ಯರನ್ನು, ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.

    ಉದ್ಘಾಟನೆಯ ನಂತರ ನೇರ ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆ ಜರುಗಿತು.  30ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಪದವೀಧರರು ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಟ್ಟವು.

    Click here

    Click here

    Click here

    Call us

    Call us

    ವೇದಿಕೆಯಲ್ಲಿ ಎಂಐಟಿ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ, ಐಏಮ್‌ಜೆಐಎಸ್‌ಸಿ ಪ್ರಾಂಶುಪಾಲೆ ಡಾ. ಪ್ರತಿಭಾ ಪಟೇಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ  ವಿವಿಧ ಕಂಪೆನಿಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು. 

    ಐಎಂಜೆ ಪ್ಲೇಸ್ಮೆಂಟ್ ಡೀನ್ ಅಮೃತಮಾಲ ವರದಿ ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಂಯೋಜಕಿ ಸೂಕ್ಷ್ಮ ಅಡಿಗ ಹಾಗೂ ಫರಾನಾ ಇಮ್ರಾನ್‌ ಅತಿಥಿ ಪರಿಚಯ ನೀಡಿದರು, ಪ್ಲೇಸ್ಮೆಂಟ್ ಡೀನ್ ಅಕ್ಷತ ನಾಯಕ್ ವಂದಿಸಿದರು ಹಾಗೂ ಇಂಗ್ಲಿಷ್ ಪ್ರಾಧ್ಯಾಪಕಿ ರಾಜೇಶ್ವರಿ ನಿರೂಪಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಿಸಲು ಸಜ್ಜಾಗಿ: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕರಿಂದ ಸೂಚನೆ

    29/09/2026

    ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ

    29/09/2026

    ಸೇವಾ ಸಂಕಲ್ಪ ಅಭಿಯಾನ: ಮಹಿಳಾ ಮೋರ್ಚಾ ವತಿಯಿಂದ ʼಅಂಗನ್ ಕಾ ಮಿಲನ್ʼ ಕಾರ್ಯಕ್ರಮ

    29/09/2026
    Leave A Reply Cancel Reply

    17 − three =

    Call us

    Click Here

    Call us

    Call us

    Call us
    Highest Viewed Recently
    • ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ಜೋಡಿ. ಪತ್ನಿಗೆ ವಿಷವುಣಿಸಿದ್ದ ಪ್ರಕರಣದ ಆರೋಪಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
    • ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಿಸಲು ಸಜ್ಜಾಗಿ: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕರಿಂದ ಸೂಚನೆ
    • ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ
    • ಉಡುಪಿ ಮಹಾತ್ಮ ಗಾಂಧೀ ಎಮೊರಿಯಲ್ ಸಂಧ್ಯಾ ಕಾಲೇಜಿನಲ್ಲಿ ʼಹಿಂದಿ ದಿವಸ್ʼ ಆಚರಣೆ
    • ಸೇವಾ ಸಂಕಲ್ಪ ಅಭಿಯಾನ: ಮಹಿಳಾ ಮೋರ್ಚಾ ವತಿಯಿಂದ ʼಅಂಗನ್ ಕಾ ಮಿಲನ್ʼ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.