ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಹಯೋಗದಲ್ಲಿ, ಕುಂದಾಪುರ ವೃತ್ತ ಮಟ್ಟದ ಕ್ರೀಡಾಕೂಟವು ಗುರುವಾರ ಗಾಂಧಿ ಮೈದಾನದಲ್ಲಿ ನಡೆಯಿತು.
ಇದರ ಅಧ್ಯಕ್ಷತೆಯನ್ನು ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಸಭೆಯಲ್ಲಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ, ನರ್ಸರಿ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಹ್ಮಣ್ಯ ಎಸ್ ಇವರು ಉಪಸ್ಥಿತರಿದ್ದರು.
ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ನಾಗೇಂದ್ರ ಅವರು ವಂದನಾರ್ಪಣೆ ಗೈದರು.
















