ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ -ಸಾಸ್ತಾನ ರೋಟರಿ ಕ್ಲಬ್‌ನ ಪ್ರಾಯೋಜಕತ್ವದಲ್ಲಿ ಬ್ರಹ್ಮಾವರ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ‘ಪ್ರಾಚ್ಯ ಪ್ರಜ್ಞೆ ‘ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಬ್ರಹ್ಮವರ ವಲಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್ಬಿನ ಅಧ್ಯಕ್ಷೆ ಕುಸುಮಾ ಮನೋಜ್ ಸ್ಪರ್ಧೆಗಳನ್ನು ಉದ್ಘಾಟಿಸಿದರು.
ಮುಖ್ಯ ಅಭ್ಯಾಗತರಾಗಿ ಶಾಲಾ ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿ ವಿಘ್ನೇಶ್ವರ ಅಡಿಗ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಸುರೇಶ್ ಕುಂದರ್, ನಾಗರಾಜ್ ಭಟ್, ರೋಟರಿ ಸದಸ್ಯರುಗಳಾದ ಮನೋಜ್ ಕುಮಾರ್, ಸುಲತಾ ಹೆಗ್ಡೆ, ಲೀಲಾವತಿ, ಮುರಳೀಧರ ನಾಯರಿ, ಚಂದ್ರ ನಾಯರಿ ರೋಟರಿ ಕಾರ್ಯದರ್ಶಿ ಕೆ ರಾಜಾರಾಮ ಐತಾಳ ಮುಂತಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಕಲ್ಪನಾ ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ನಾಗರಾಜ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಯಂ ಫಕೀರಪ್ಪ ಕಾರ್ಯಕ್ರಮ ನಿರೂಪಿಸಿದರು . ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಶಾಲೆಗೆ ವೈಟ್ ಪ್ಯಾನಲ್ ಬೋರ್ಡ್ ಅನ್ನು ಕೊಡುಗೆಯಾಗಿ ನೀಡಲಾಯಿತು.
















