ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ವತಿಯಿಂದ ಭಂಡಾರ್ಕಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ 74 ಕೆ.ಜಿ ವಿಭಾಗದಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗೆದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.











