ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ. (ದ) ವತಿಯಿಂದ ಅನುಷ್ಠಾನಗೊಳಿಸಲಾದ ಹೊಸತು ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಾಂಗಕ್ಕೆ ಆರ್ಥಿಕ ನೆರವು (ನವೀಕರಣ) ಹಾಗೂ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆಗಳ ಸೌಲಭ್ಯ ಪಡೆಯಲು ಪ್ರವರ್ಗ -1ರ 6(ಎ) ಯಿಂದ 6 (ಎ.ಕೆ) ವರೆಗೆ ಬರುವ ಬೆಸ್ತ, ಅಂಬಿಗ/ ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಖಾರ್ವಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://ambigaradevelopment.karnataka.gov.in ನಿಗಮದ ದೂ.ಸಂಖ್ಯೆ: 080-22864099 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.











