ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವದ ಪ್ರಯುಕ್ತ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನ ಚೇಂಪಿ ಇಲ್ಲಿ ಗುರುವಾರ ಜರಗಿತು.

ಸಭೆಯಲ್ಲಿ ಅಂತರಾಷ್ಟ್ರೀಯ ಅಂದ ಕ್ರಿಕೆಟ್ ಕ್ರೀಡಾಪಟು ಕಾವ್ಯ ವಿ ಆಚಾರ್ ರಿಪ್ಪನ್ ಪೇಟೆ ಅವರನ್ನು ಸನ್ಮಾನಿಸಲಾಯಿತು. ಸಮಾಜ ಸೇವಕ ಕೃಷ್ಣಯ್ಯ ಆಚಾರ್ ಬನ್ನಾಡಿ ಇವರನ್ನು ವಿಶೇಷವಾಗಿ ಗೌರವಿಸಲಾಯಿತು.
ಇದೇ ವೇಳೆ ಉತ್ಸವದ ಅಂಗವಾಗಿ ಏರ್ಪಡಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದರಿಗೆ ಬಹುಮಾನ ವಿತರಣೆ. ಹಿರಿಯ ನಾಗರಿಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ, ಗೋಪಾಲಕೃಷ್ಣ ಆಚಾರ್ಯ ದತ್ತಿನಿಧಿ ವಿತರಣೆ ಜರಗಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘದ ಅಧ್ಯಕ್ಷರ ಮಣೂರು ಸುಬ್ರಾಯ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವೈದ್ಯರಾದ ಡಾ. ಅಶೋಕ್ ಆಚಾರ್ಯ , ಅಧ್ಯಾಪಕಿ ಶಕುಂತಲಾ ಗಂಗಾಧರ ಆಚಾರ್ಯ, ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷ ರಮ್ಯಾ ರಮೇಶ್ ಆಚಾರ್ ಚೇoಪಿ, ಉಪಸ್ಥಿತರಿದ್ದರು.
ವಿಶ್ವಕರ್ಮ ಕಲಾ ವೃಂದದ ಅಧ್ಯಕ್ಷ ವೆಂಕಟೇಶ ಆಚಾರ್ಯ ಪಾರಂಪಳ್ಳಿ ಸ್ವಾಗತಿಸಿದರು. ಸಂಘದ ಗೌರವ ಅಧ್ಯಕ್ಷ ಜನಾರ್ಧನ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಅಜಿತ್ ಆಚಾರ್ಯ ಕೋಟ ನಿರೂಪಿಸಿದರು. ಸಂಘದ ಕಾರ್ಯದರ್ಶಿ ರಮೇಶ್ ಆಚಾರ್ಯ ಚೇoಪಿ ವಂದಿಸಿದರು. ನಂತರ ವಿಶ್ವಜ್ಯೋತಿ ಮಹಿಳಾ ಬಳಗದ ಸದಸ್ಯರಿಂದ ಹಾಗೂ ವಿಶ್ವಕರ್ಮ ಕಲಾವೃಂದದ ಸದಸ್ಯರಿಂದ ಮನೋರಂಜನ ಕಾರ್ಯಕ್ರಮ ನೆರವೇರಿತು.
















