Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ಸಂಪರ್ಕ ಬೆಳೆಸಿಕೊಳ್ಳಬೇಕು: ದಿಶಾ ಸಿ. ಶೆಟ್ಟಿ
    alvas nudisiri

    ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ಸಂಪರ್ಕ ಬೆಳೆಸಿಕೊಳ್ಳಬೇಕು: ದಿಶಾ ಸಿ. ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳು ಮತ್ತು ಪದವಿಗೆ ಸೀಮಿತರಾಗದೆ, ಪರಿಣಾಮಕಾರಿ ಸಂವಹನ ಕೌಶಲ್ಯ, ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಉತ್ತಮ ಸಂಪರ್ಕ ಬೆಳೆಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಬೇಕು ಎಂದು ಆಳ್ವಾಸ್ ಎಂಬಿಎ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ದಿಶಾ ಸಿ. ಶೆಟ್ಟಿ ನುಡಿದರು.  

    Click Here

    Call us

    Click Here

    ಅವರು ಆಳ್ವಾಸ್ ಕಾಲೇಜು (ಸ್ವಾಯತ್ತ), ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗವು ಶುಕ್ರವಾರ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ಮಾತನಾಡಿದರು. ವೈಯಕ್ತಿಕ ಬದುಕು ಹಾಗೂ ವೃತ್ತಿಜೀವನದಲ್ಲಿನ ಸಂವಹನದ ಸ್ವರೂಪದಲ್ಲಿ ವ್ಯತ್ಯಾಸವಿದೆ. ವೈಯಕ್ತಿಕ ಜೀವನದಲ್ಲಿ ವ್ಯಕ್ತಿಯು ತನ್ನ ಆಯ್ಕೆಯಂತೆ ಮಾತನಾಡಬಹುದು. ಆದರೆ ವೃತ್ತಿಜೀವನದಲ್ಲಿ ಸಾಂಸ್ಕೃತಿಕ ಭಿನ್ನತೆ, ಭಾಷಾ ವೈವಿಧ್ಯ ಹಾಗೂ ವಿಭಿನ್ನ ಹಿನ್ನೆಲೆಯ ಜನರೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುವ ಸಾಮರ್ಥ್ಯ ಮಹತ್ವದ ಪಾತ್ರ ವಹಿಸುತ್ತದೆ. ವಿಭಿನ್ನ ಹಿನ್ನೆಲೆಯ ಜನರೊಂದಿಗೆ ಮುಕ್ತವಾಗಿ ಮಾತನಾಡುವ ಮತ್ತು ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಸಾಮರ್ಥ್ಯವು ವಿದ್ಯಾರ್ಥಿಗಳ ಮುಂದಿನ ಬದುಕಿನಲ್ಲಿ ಹಲವು ಹೊಸ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ.

    ವಿದ್ಯಾರ್ಥಿಗಳು ಒಂದೇ ಕ್ಷೇತ್ರಕ್ಕೆ ಸೀಮಿತರಾಗದೆ ವಿವಿಧ ಕ್ಷೇತ್ರಗಳ ಕುರಿತು ಆಸಕ್ತಿ ಮತ್ತು ಜ್ಞಾನವನ್ನು ಬೆಳೆಸಿಕೊಳ್ಳಬೇಕು. ವಿಭಿನ್ನ ಕ್ಷೇತ್ರಗಳ ವ್ಯಕ್ತಿಗಳೊಂದಿಗೆ ಬೆಳೆಸಿಕೊಳ್ಳುವ ಸಂಪರ್ಕವು ಮುಂದಿನ ದಿನಗಳಲ್ಲಿ ಉತ್ತಮ ಸಂಪರ್ಕಜಾಲವಾಗಿ ರೂಪುಗೊಂಡು ಹೊಸ ಅವಕಾಶಗಳನ್ನು ಸೃಷ್ಟಿಸಬಲ್ಲದು.

    ಅಂಕಪಟ್ಟಿಯು ಉದ್ಯೋಗ ಜಗತ್ತಿಗೆ ಪ್ರವೇಶಿಸಲು ನೆರವಾಗಬಹುದು. ಆದರೆ ಉದ್ಯೋಗ ಪಡೆಯುವುದರ ಜತೆಗೆ ವೃತ್ತಿಜೀವನದಲ್ಲಿ ಮುನ್ನಡೆಯಲು ವಿದ್ಯಾರ್ಥಿಗಳು ತಮ್ಮನ್ನು ಇತರರಿಂದ ವಿಭಿನ್ನವಾಗಿಸುವ ಹೆಚ್ಚುವರಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪದವಿ ಮತ್ತು ಅಂಕಗಳೊಂದಿಗೆ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಹೆಚ್ಚುವರಿ ಪ್ರಯತ್ನ, ಅನುಭವ ಹಾಗೂ ನಿರಂತರ ಕಲಿಕೆಗೆ ಆದ್ಯತೆ ನೀಡಬೇಕು ಎಂದರು.

    ಜೀವನದಲ್ಲಿ ಎದುರಾಗುವ ವಿಚಾರಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ, ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನದೇ ಆದ ವೈಶಿಷ್ಟ್ಯ ಮತ್ತು ಗುರುತನ್ನು ರೂಪಿಸಿಕೊಂಡಾಗ ವೈಯಕ್ತಿಕ ಹಾಗೂ ವೃತ್ತಿಪರ ಬೆಳವಣಿಗೆಗೆ ಹೊಸ ದಾರಿಗಳು ತೆರೆದುಕೊಳ್ಳುತ್ತವೆ ಎಂದರು.

    Click here

    Click here

    Click here

    Call us

    Call us

    ಆಳ್ವಾಸ್ ಸೈನ್ಸ್ ವಿಭಾಗದ ಡೀನ್ ರಮ್ಯಾ ರೈ ಹಾಗೂ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಮುಖ್ಯಸ್ಥ ಡಾ. ಟಿ. ಕೆ. ರವೀಂದ್ರನ್ ಇದ್ದರು. ಪೂರ್ವಿ ಅತಿಥಿಯನ್ನು ಪರಿಚಯ ಮಾಡಿಕೊಟ್ಟರು. ವಿದ್ಯಾರ್ಥಿನಿ ಅಕ್ಷತಾ ಪೈ ಸ್ವಾಗತಿಸಿ, ಅಮೀನಾ ಫಾತಿಮಾ ಕಾರ್ಯಕ್ರಮ ನಿರೂಪಿಸಿ, ಭುವನಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    19/09/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ

    19/09/2026

    ಕುಸ್ತಿ ಸ್ಪರ್ಧೆ: ವಿಶ್ವ ವಿನಾಯಕ ಕಾಲೇಜಿನ ವಿದ್ಯಾರ್ಥಿ ಶಮಂತ್‌ಗೆ ಬೆಳ್ಳಿ ಪದಕ

    18/09/2026
    Leave A Reply Cancel Reply

    eleven − 5 =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಸ್ವಚ್ಛತಾ ಹಿ ಸೇವಾ – ಆಂದೋಲನದ ಪರವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ
    • ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ: ಶ್ರೀ ರಾಘವೇಶ್ವರ
    • ಸಾಲ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.