ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ಅವರು 71 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಈ ಸಾಧನೆಯ ಮೂಲಕ ಅವರು ಸೆಪ್ಟೆಂಬರ್ 24 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.











