ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿ ಸಹಾಯಧನ / ಸಾಲ ಸೌಲಭ್ಯ ಪಡೆಯಲು ಅಲೆಮಾರಿ ಮತ್ತು ಅರೆ ಅಲೆಮಾರಿ ಹಾಗೂ ಅದರ ಉಪಜಾತಿಗಳಿಗೆ ಸೇರಿರುವ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kaad.karnataka.gov.in , ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22374832, 22374833 ಅಥವಾ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.











