Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಯಜ್ಞ – ತಪಸ್ಸು – ವ್ರತಗಳನ್ನು ಮಾಡದೇ ಇದ್ದರೂ ಬಾಯಾರಿದವರಿಗೆ ನೀರನ್ನು ದಾನ ಮಾಡಿದವನು ಸ್ವರ್ಗವನ್ನು ಪಡೆಯುತ್ತಾನೆ.

    ಬಾಯಾರಿದವರಿಗೆ ನೀರು ನೀಡುವುದು ಮತ್ತೊಬ್ಬರ ಜಠರಾಗ್ನಿಗೆ ಜಲವನ್ನು ಆಹುತಿಯಾಗಿ ನೀಡುವ ಯಜ್ಞದಂತೆ. ಬೇಸಿಗೆಯಲ್ಲಿ ದಾರಿಹೋಕರಿಗೆ ನೀರನ್ನು ಒದಗಿಸುವುದು, ಬಾವಿ ಹಾಗೂ ಕೆರೆಗಳನ್ನು ನಿರ್ಮಿಸುವುದು ಶ್ರೇಷ್ಠ ಕಾರ್ಯ ಎಂದು ಧರ್ಮ ಶಾಸ್ತ್ರವನ್ನು ಆಧರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.

    ಜೀವನದಲ್ಲಿ ದೊರೆಯುವ ಅಪರೂಪದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದ ಶ್ರೀಗಳು, ಸ್ವಾತಿ ನಕ್ಷತ್ರದ ಮಳೆಯ ನೀರಿನ ಕುರಿತಾಗಿ ವಿವರಿಸುತ್ತಾ, ಇದು ಜೀರ್ಣಕ್ಕೆ ಲಘು, ದೇಹಕ್ಕೆ ಪಥ್ಯಕರ ಹಾಗೂ  ದೀರ್ಘಕಾಲದವರೆಗೆ ಕೆಡದಂತೆ ಉಳಿಯುವ ದಿವ್ಯಗುಣವನ್ನು ಸ್ವಾತಿ ಮಳೆ ನೀರು ಹೊಂದಿರುತ್ತದೆ. ವರ್ಷಗಳ ಕಾಲ ಇದನ್ನು ಸಂಗ್ರಹಿಸಿದರೂ ಈ ನೀರಿನಲ್ಲಿ ಸೂಕ್ಷಣು ಜೀವಿಗಳು ಉತ್ಪತ್ತಿಯಾಗುವುದಿಲ್ಲ ಎಂದು ಆಧುನಿಕ ವಿಜ್ಞಾನವೂ ಒಪ್ಪಿದೆ ಎಂದರು.

    ಗಂಗಾ ನದಿಯ ನೀರಿನ ಸಂಸರ್ಗದಿಂದ ಪಾಪ ಪರಿಹಾರದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಪಶ್ಚಾತ್ತಾಪ ಇರುವವನಿಗೆ ಮಾತ್ರ ಪ್ರಾಯಶ್ಚಿತ್ತ ಮಾಡುವ ಅಧಿಕಾರ ಇರುವುದಾಗಿದೆ. ಮಾಡಿದ ತಪ್ಪನ್ನು ಅರಿತು ಪುನಃ ತಪ್ಪನ್ನು ಮಾಡದಿರುವ ದೃಢಸಂಕಲ್ಪವೇ ಪ್ರಾಯಶ್ಚಿತ್ತವಾಗಿದ್ದು, ಆ ಮನಸ್ಸಿನಿಂದ ಮಾಡಿದ ಗಂಗಾ ಸ್ನಾನದಿಂದ ಮಾತ್ರ ಪಾಪ ಪರಿಹಾರವಾಗುತ್ತದೆ ಎಂದು ಉತ್ತರಿಸಿದರು.

    Click here

    Click here

    Click here

    Call us

    Call us

    ಆನಂದ ಭಟ್ ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ಸಮರ್ಪಿಸಿದರು. ದಿನಪ್ರಧಾನರಾಗಿ ರಾಮಚಂದ್ರರಾವ್ ಗಾಂಜಾಳ ದಂಪತಿಗಳು ಉಪಸ್ಥಿತರಿದ್ದರು.

    ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ:
    ಶ್ರೀರಾಮಚಂದ್ರಾಪುರ ಮಠಕ್ಕೆ ತಲೆತಲಾಂತರದಿಂದ ನಡೆದುಕೊಳ್ಳುವ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು. ಪಾದುಕಾ ಪೂಜೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಮಡಿವಾಳ ಸಮಾಜವು ಸಂಘಟಿತವಾಗುವ ಮೂಲಕ ಹೆಚ್ಚಿನ ಒಳಿತನ್ನು ಪಡೆಯುವಂತಾಗಲಿ. ಸಮಾಜದ ಜೊತೆಗೆ ಗುರುಪೀಠ ಸದಾ ಇರಲಿದ್ದು, ಸಮಾಜದ ಕಷ್ಟ – ನಷ್ಟಗಳು ದೂರವಾಗಲಿ ಎಂದು ಆಶೀರ್ವದಿಸಿದರು.

    ಮಂಜುನಾಥ ಮಡಿವಾಳ, ಸದಾನಂದ ಮಡಿವಾಳ, ಮಂಜುನಾಥ ಬಿಳಗಿ, ರಮಾನಂದ ಮಡಿವಾಳ ಸೇರಿದಂತೆ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಸ್ವಚ್ಛತಾ ಹಿ ಸೇವಾ – ಆಂದೋಲನದ ಪರವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ

    19/09/2026

    ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    19/09/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ

    19/09/2026
    Leave A Reply Cancel Reply

    one × 3 =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಸ್ವಚ್ಛತಾ ಹಿ ಸೇವಾ – ಆಂದೋಲನದ ಪರವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ
    • ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ: ಶ್ರೀ ರಾಘವೇಶ್ವರ
    • ಸಾಲ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.