ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಸ್ವಚ್ಛತಾ ಹಿ ಸೇವಾ – 2026 ಆಂದೋಲನದ ಪರವಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರು ಮಾತನಾಡಿ, ಮಕ್ಕಳಿಗೆ ಸ್ವಚ್ಛತಾ ವಿಷಯದ ಬಗ್ಗೆ ತಿಳಿ ಹೇಳಿ, ಮಕ್ಕಳಾಗಿ ತಮ್ಮ ಜವಾಬ್ದಾರಿ ಬಗ್ಗೆ ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಇ ಒ ವಿವಿರಾಜ್ ಹೆಗ್ಡೆ ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ವಿದ್ಯಾರ್ಥಿಗಳು, ಶಿಕ್ಷಕರು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.











