ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಆಧಾರ್ ಕಾಡ್೯ ಕೆವೈಸಿ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಆಧಾರ್ ಅಭಿಯಾನ ಪೂರಕ ವಾತಾವರಣ ಕಲ್ಪಿಸುವುದರ ಜತೆಗೆ ಅದೊಂದು ಜನಸ್ನೇಹಿ ಕಾರ್ಯಕ್ರಮವಾಗಿ ರೂಪುಗೊಂಡಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾದ ಆಡಳಿತ ಮಂಡಳಿಯ ಅಧ್ಯಕ್ಷ ನರಿಕೊಂಬು ಪ್ರಕಾಶ್ ಕಾರಂತ್ ಹೇಳಿದರು.

ಅವರು ಶನಿವಾರ ಸಾಲಿಗ್ರಾಮದ ಗಿರಿಜಾ ಸಭಾಂಗಣದಲ್ಲಿ ಭಾರತೀಯ ಅಂಚೆ ಇಲಾಖೆ ಮತ್ತು ಕಾರ್ಕಡ ಗೆಳೆಯರ ಬಳಗ ನೇತೃತ್ವದಲ್ಲಿ ಹಮ್ಮಿಕೊಂಡ ಆಧಾರ್ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಸಂಸ್ಥೆಗಳು ಜನಪರ ಕಾರ್ಯಕ್ರಮಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ಮಾದರಿಯಾಗುವ ಕಾರ್ಯ ಎಸೆಗಬೇಕು ಈ ನಿಟ್ಟಿನಲ್ಲಿ ಗೆಳೆಯರ ಬಳಗ ಮನೆಮಾತಾಗಿ ಬೆಳೆದ ಸಂಸ್ಥೆಯಾಗಿ ರೂಪುಗೊಂಡಿದೆ ಎಂದರು.
ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಅಧ್ಯಕ್ಷೆತೆಯನ್ನು ವಹಿಸಿ ಸ್ವಾಗತಿಸಿದರು. ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ದೇಗುಲದ ಟ್ರಸ್ಟಿ ಪ್ರಕಾಶ್ ಮಯ್ಯ, ಅಂಚೆ ಇಲಖೆ ಕುಂದಾಪುರ ವಿಭಾಗದ ಸಭಾ ರೆಡ್ಡಿ, ಕಾರ್ಕಡ ಅಂಚೆ ಕಛೇರಿಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ಬಳಗದ ಉಪಾಧ್ಯಕ್ಷ ಶಶಿಧರ ಮಯ್ಯ ಕಾರ್ಯಕ್ರಮ ನಿರೂಪಿಸಿ, ಜಗದೀಶ ಆಚಾರ್ ವಂದಿಸಿದರು.
















