ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಂಜಿನಿಯರ್ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಭಾರತೀಯ ವೈಮಾನಿಕ ಕ್ಷೇತ್ರದ ಖ್ಯಾತ ವಿಜ್ಞಾನಿ ಹಾಗೂ ನಿವೃತ್ತ ಎಲೆಕ್ಟ್ರಾನಿಕ್ಸ್ ಇಂಜಿನಿಯರ್, ಕುಂದಾಪುರದ ಡಾ. ಕೆ. ಕರುಣಾಕರ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಕರುಣಾಕರ ಅವರು, ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯ (NAL) ಹಾಗೂ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ADA)ನಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ‘ತೇಜಸ್ʼ ಲಘು ಯುದ್ಧ ವಿಮಾನ ಹಾಗೂ ‘ಅಗ್ನಿʼ ಕ್ಷಿಪಣಿಯ ಅಭಿವೃದ್ಧಿ, ವಿನ್ಯಾಸ ಮತ್ತು ತಯಾರಿಕೆಯಲ್ಲಿ ತಾವು ಪಡೆದ ಅನುಭವಗಳನ್ನು ಹಂಚಿಕೊಂಡರು.
ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿದರೆ ಅವಕಾಶಗಳು ತಾನಾಗಿಯೇ ಅರಸಿಕೊಂಡು ಬರುತ್ತವೆ ಎಂದು ಯುವ ಇಂಜಿನಿಯರ್‌ಗಳಿಗೆ ಕಿವಿಮಾತು ಹೇಳಿದರು.
ಎಚ್. ಜಗದೀಶ್ ಪರಿಚಯಿಸಿ ಅಭಿನಂದಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ ಸ್ವಾಗತಿಸಿದರು. ಚಂದ್ರಶೇಖರ ಶೆಟ್ಟಿ ವಂದಿಸಿದರು. ಹೆರಿಯ ಮಾಸ್ಟರ್ ಪ್ರಾರ್ಥನೆ ನೆರವೇರಿಸಿ ಕಾರ್ಯಕ್ರಮ ನಿರೂಪಿಸಿದರು.
















