Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್‌ ಶಿಕ್ಷಕರ ತರಬೇತಿ ಕಾರ್ಯಾಗಾರ ಯಶಸ್ವಿ
    ಊರ್ಮನೆ ಸಮಾಚಾರ

    ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್‌ ಶಿಕ್ಷಕರ ತರಬೇತಿ ಕಾರ್ಯಾಗಾರ ಯಶಸ್ವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : “ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಮುಂದುವರಿದಿದ್ದಾರೆ. ಮಕ್ಕಳ ಈ ಬುದ್ಧಿಮತ್ತೆಗೆ ತಕ್ಕ ಹಾಗೆ ಶಿಕ್ಷಕರು ಕೂಡ ತಮ್ಮ ಬೋಧನಾ ಶೈಲಿಯನ್ನು ಹಾಗೂ ಆಲೋಚನೆಗಳನ್ನು ನಿರಂತರವಾಗಿ ಪರಿಷ್ಕರಿಸಿಕೊಳ್ಳಬೇಕು” ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ವಿದ್ಯಾರಣ್ಯ ಶಾಲೆಯಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಲಯನ್ಸ್ ಕ್ಲಬ್ ತಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಲಯನ್ಸ್ ಕ್ವೆಸ್ಟ್ ಟೀಚರ್ ಟ್ರೈನಿಂಗ್ ಕಾರ್ಯಾಗಾರ’ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    “ಲಯನ್ಸ್ ಸಂಸ್ಥೆಯು ಹಮ್ಮಿಕೊಳ್ಳುವ ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅತ್ಯಂತ ಸಹಾಯಕವಾಗಿವೆ. ಇಂದಿನ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಅತ್ಯಂತ ಮುಂದುವರಿದಿದ್ದಾರೆ ಹಾಗಾಗಿ ಮಕ್ಕಳಿಗೆ ತಕ್ಕ ಹಾಗೇ ಶಿಕ್ಷಕರು ಕೂಡ ತಮ್ಮ ಬೋಧನಾ ಶೈಲಿಯನ್ನು ಹಾಗೂ ಆಲೋಚನೆಗಳನ್ನು ಅಪ್‌ಡೇಟ್ ಮಾಡಿಕೊಳ್ಳಬೇಕು. ಆಗ ಮಾತ್ರ ವಿದ್ಯಾರ್ಥಿಗಳ ಮನಸ್ಸನ್ನು ಅರಿತು ಉತ್ತಮ ಶಿಕ್ಷಕರಾಗಲು ಮತ್ತು ಅವರ ಮಾರ್ಗದರ್ಶಕರಾಗಲು ಸಾಧ್ಯವಿದೆ” ಎಂದು ಅವರು ಅಭಿಪ್ರಾಯಪಟ್ಟರು. ಶಿಕ್ಷಕರು ಈ ತರಬೇತಿಯ ಪ್ರತಿಯೊಂದು ಸದುಪಯೋಗವನ್ನು ಪಡೆದುಕೊಂಡು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

    ಡಿಸ್ಟ್ರಿಕ್ಟ್  317 Cಯ ಗವರ್ನರ್ ಲಯನ್ ಎಂಜೆಎಫ್ ರಾಜೀವ ಕೋಟ್ಯಾನ್ ಮಾತನಾಡಿ, ಶಿಕ್ಷಕರು ಮಕ್ಕಳ ಭವಿಷ್ಯ ನಿರ್ಮಾಣದ ರೂವಾರಿಗಳು. ಹದಿಹರೆಯದ ಮಕ್ಕಳ ಮನಸ್ಸನ್ನು ಅರಿತುಕೊಂಡು ಉತ್ತಮ ಪ್ರಜೆಗಳನ್ನಾಗಿ ತಿದ್ದಿ ತೀಡುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

    ಫಸ್ಟ್ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್ ಪಿಎಂಜೆಎಫ್ ಹರಿಪ್ರಸಾದ್ ರೈ ಮಾತನಾಡಿ, ಹದಿಹರೆಯದ ಮಕ್ಕಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು, ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶ ಎಂದರು.

    Click here

    Click here

    Click here

    Call us

    Call us

    ಸೆಕೆಂಡ್ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್ ಪಿಎಂಜೆಎಫ್ ಇಂಜಿನಿಯರ್ ರಮಾನಂದ ಅವರು ಮಾತನಾಡಿ, ಪ್ರಸ್ತುತ ಮಕ್ಕಳಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ (ಕೃತಕ ಬುದ್ಧಿಮತ್ತೆ) ಹೆಚ್ಚಾಗುತ್ತಿದ್ದು, ಅದಕ್ಕೆ ತಕ್ಕಂತೆ ‘ಎಮೋಷನಲ್ ಇಂಟೆಲಿಜೆನ್ಸ್‌’ (ಭಾವನಾತ್ಮಕ ಬುದ್ಧಿಮತ್ತೆ) ಕೊರತೆ ಕಾಣಿಸಿಕೊಳ್ಳುತ್ತಿದೆ. ಪೋಷಕರು ಮತ್ತು ಗುರು-ಹಿರಿಯರ ಜೊತೆ ವಿದ್ಯಾರ್ಥಿಗಳು ಹೇಗೆ ಸಾಮರಸ್ಯದಿಂದಿರಬೇಕು ಎಂಬುದನ್ನು ಈ ತರಬೇತಿ ಮೂಲಕ ತಿಳಿಸಿಕೊಡಲಾಗುವುದು ಎಂದರು.

    ವೇದಿಕೆಯಲ್ಲಿ ತಲ್ಲೂರಿನ ಲಯನ್ಸ್ ಕ್ಲಬ್ ಅಧ್ಯಕ್ಷ ಸುಂದರ್ ಶೆಟ್ಟಿ, ಕುಂದಾಪುರ ಲಯನ್ಸ್ ಕ್ಲಬ್ ಸೆಕ್ರೆಟರಿ ದಿನಕರ್ ಶೆಟ್ಟಿ, ಲಯನ್ಸ್ ಕ್ವೆಸ್ಟ್ ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಡಾ.ಕಿಶೋರ್ ಕುಮಾರ್ ಶೆಟ್ಟಿ, ಡಿಸ್ಟ್ರಿಕ್ಟ್‌ GAT Consultant ಅರುಣ್ ಕುಮಾರ್ ಹೆಗ್ಡೆ, ಲಯನ್ ಎಂಜೆಎಫ್‌ ನ ರಿಜನ್‌ ಚೇರ್‌ ಪರ್ಸನ್‌  ಹಾಗೂ  ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್‌ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲರಾದ ಅನಿತಾ ಕುಮಾರಿ, ಉಪಪ್ರಾಂಶುಪಾಲರಾದ ಸ್ಪೂರ್ತಿ ಎ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೊಗವೀರ ಯುವ ಸಂಘಟನೆ ಹಾಲಾಡಿ – ಶಂಕರನಾರಾಯಣ ಘಟಕ: ಸ್ವಯಂಪ್ರೇರಿತ ರಕ್ತದಾನ ಶಿಬಿರ

    21/09/2026

    ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ 106ನೇ ವಾರ್ಷಿಕ ಸಾಮಾನ್ಯ ಸಭೆ

    21/09/2026

    ಯುವ ಜನೋತ್ಸವ – ರಸಪ್ರಶ್ನೆ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

    21/09/2026
    Leave A Reply Cancel Reply

    2 × 4 =

    Call us

    Click Here

    Call us

    Call us

    Call us
    Highest Viewed Recently
    • ಮೊಗವೀರ ಯುವ ಸಂಘಟನೆ ಹಾಲಾಡಿ – ಶಂಕರನಾರಾಯಣ ಘಟಕ: ಸ್ವಯಂಪ್ರೇರಿತ ರಕ್ತದಾನ ಶಿಬಿರ
    • ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್‌ ಶಿಕ್ಷಕರ ತರಬೇತಿ ಕಾರ್ಯಾಗಾರ ಯಶಸ್ವಿ
    • ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ
    • ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ 106ನೇ ವಾರ್ಷಿಕ ಸಾಮಾನ್ಯ ಸಭೆ
    • ಯುವ ಜನೋತ್ಸವ – ರಸಪ್ರಶ್ನೆ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.