Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ
    ಉಡುಪಿ ಜಿಲ್ಲೆ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಶ್ವ ಹಿರಿಯ ನಾಗರಿಕ ದಿನಾಚರಣೆ ಹಾಗೂ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆಯಡಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸುವ ಸಲುವಾಗಿ ಪೂರ್ವಭಾವಿ ಸಭೆಯು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಅಧ್ಯಕ್ಷತೆಯಲ್ಲಿ ನಡೆಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಅಕ್ಟೋಬರ್ 1 ರಂದು ನಗರದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಅಂದು ಬೆಳಗ್ಗೆ 9 ರಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದರು.

    ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸೆಪ್ಟೆಂಬರ್ 28 ರಂದು ಬೆಳಗ್ಗೆ 9 ರಿಂದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾ ವಿಭಾಗದಲ್ಲಿ ಬಿರುಸಿನ ನಡಿಗೆ, ಬಕೆಟ್‌ಗೆ ಬಾಲ್ ಎಸೆಯುವುದು, ಕೇರಂ ಹಾಗೂ ರಂಗೋಲಿ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಪುರುಷ ಹಾಗೂ ಮಹಿಳಾ ಹಿರಿಯ ನಾಗರಿಕರಿಗೆ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ಆಯೋಜಿಸಿದ್ದು, ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದ ಅವರು ಕ್ರೀಡಾಕೂಟಗಳು ನಡೆಯುವ ದಿನದಂದು ಹಿರಿಯ ನಾಗರಿಕರಿಗೆ ತುರ್ತು ಚಿಕಿತ್ಸೆ ನೀಡಲು ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ಸ್ಥಳದಲ್ಲಿ ಇಟ್ಟುಕೊಳ್ಳಬೇಕು ಎಂದರು.

    ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದ ದಿನದಂದು ಸಭಾ ಕಾರ್ಯಕ್ರಮದ ನಂತರ ಬಾಂಡಿಂಗ್ ಮೇಳ ಆಯೋಜಿಸಲಾಗುತ್ತಿದ್ದು, ಇದರಲ್ಲಿ ಮೂರು ತಲೆಮಾರುಗಳ ಪ್ರತಿನಿಧಿಗಳಾದ ಹಿರಿಯ ನಾಗರಿಕರು, ಪೋಷಕರು / ಮಧ್ಯಮ ವಯಸ್ಕರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ. ಹಿರಿಯ ನಾಗರಿಕರು ತಮ್ಮ ಜೀವನ ಮೌಲ್ಯಗಳು, ವಿಚಾರಧಾರೆ, ಉಡುಗೆ-ತೊಡುಗೆ, ಆಹಾರದ ಪದ್ಧತಿ ಮಹತ್ವ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಶತಾಯುಷಿಗಳನ್ನು ಸಹ ಸನ್ಮಾನ ಮಾಡಲಾಗುವುದು ಎಂದರು.  

    ಹಿರಿಯ ನಾಗರಿಕರಿಗೆ ಯಾವುದೇ ಕುಂದುಕೊರತೆ ಉಂಟಾಗದಂತೆ ಕುಡಿಯುವ ನೀರು, ಊಟೋಪಚಾರ, ಆಸನ ಸೇರಿದಂತೆ ಎಲ್ಲ ಮೂಲಭೂತ ಅವಶ್ಯಕತೆಗಳ ಪಟ್ಟಿ ಮಾಡಿ ವಿವಿಧ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಟನೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಶಿಷ್ಟಾಚಾರದಂತೆ ಅಹ್ವಾನ ಪತ್ರಿಯನ್ನು ಮುದ್ರಿಸಿ ಜನಪ್ರತಿನಿಧಿ ಹಾಗೂ ಗಣ್ಯರಿಗೆ ನೀಡಿ ಆಹ್ವಾನಿಸಬೇಕು, ಹಿರಿಯ ನಾಗಕರಿರ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದ ಅವರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಚ್ಚಿನ ಪ್ರಚಾರ ನೀಡಬೇಕು ಎಂದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಟಿ.ಎನ್ ಮಂಜುಳಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಲೀಡ್ ಕಾಲೇಜು ಪ್ರಾಂಶುಪಾಲೆ ಡಾ. ನಿಕೇತನಾ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಹೆಗಡೆ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

    22/09/2026

    ಡಿಪ್ಲೋಮ ಇನ್ ಕೋ-ಆಪರೇಟಿವ್ ಮೇನೇಜ್‌ಮೆಂಟ್ ಕೋರ್ಸ್‌ನಲ್ಲಿ ಶ್ರೀಧರ್ ಸಾಸ್ತಾನ ಅವರು ‘ಎ’ ಶ್ರೇಣಿಯಲ್ಲಿ ತೇರ್ಗಡೆ

    21/09/2026

    ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    21/09/2026
    Leave A Reply Cancel Reply

    twenty + 1 =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ
    • ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಪ್ರತಿಯೊಬ್ಬ ಮಹಿಳೆಯ ಹಕ್ಕು: ಮರ್ಲಿನ್‌ ಮಾರ್ಟಿಸ್‌
    • ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಿಬ್ಬಂದಿಗಳಿಗೆ ʼಧ್ಯಾನʼ ಕುರಿತು ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.