ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 21ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ 2026 ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಇಂಪನಾ ಆರ್ (4ನೇ ತರಗತಿ) ಪ್ರಥಮ ಸ್ಥಾನ, ಅಧ್ವಿಕ್ ಕ್ಷತ್ರೀಯ (4ನೇ ತರಗತಿ) ಐದನೆಯ ಸ್ಥಾನ ಹಾಗೂ ಕೌಸ್ತುಭ (6ನೇ ತರಗತಿ )ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.











